Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:5 - ಕನ್ನಡ ಸತ್ಯವೇದವು C.L. Bible (BSI)

5 ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ I ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಾಗ್ರದಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ. ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕೇಡಿನ ಸಮಯದಲ್ಲಿ ಯೆಹೋವ ದೇವರು ನನ್ನನ್ನು ತಮ್ಮ ಗುಡಾರದಲ್ಲಿ ಬಚ್ಚಿಡುವರು. ತಮ್ಮ ಪರಿಶುದ್ಧ ಗುಡಾರದಲ್ಲಿ ನನ್ನನ್ನು ಮರೆಮಾಡುವರು. ಎತ್ತರವಾದ ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:5
33 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ಪಾರುಮಾಡುವುದವರನು ನಿನ್ನ ಸಾನ್ನಿಧ್ಯ ಸೆರಗು, ಜನರೊಳಸಂಚಿನಿಂದ I ದೂರವಿಡುವುದವರನು ನಿನ್ನಾಸರೆಯು, ವ್ಯಾಜ್ಯಮಾಡುವ ಜಿಹ್ವೆಯಿಂದ II


ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ನನ್ನಾಶ್ರಯವೂ ಕವಚವೂ ನೀನೇ I ನಿರೀಕ್ಷಿಸುತಿರುವೆ ನಿನ್ನ ವಾಕ್ಯವನೆ II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ I ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ II


ಮುತ್ತಿಗೆ ಹಾಕಿರುವ ಹೀನ ಶತ್ರುಗಳಿಂದ I ಸುತ್ತುವರೆದಿರುವ ಪ್ರಾಣ ವೈರಿಗಳಿಂದ I ನಿನ್ನ ಕನೀನಿಕೆಯಂತೆ ಎನ್ನ ಕಾಪಾಡು I ನಿನ್ನ ರೆಕ್ಕೆಗಳ ನೆರಳಲಿ ಎನ್ನ ಮರೆಸಿಡು II


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


“ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ಎದೆಗುಂದಿ ಮೊರೆಯಿಡುತ್ತಿರುವೆ ಜಗದೆಲ್ಲೆಯಿಂದ I ಹತ್ತಲಾಗದ ಆಶ್ರಯಗಿರಿಗೆ ಹತ್ತಿಸೆನ್ನ II


ನನಗಿತ್ತನಾತ ಹುಲ್ಲೆಯಂತ ಮೊನೆಗಾಲು I ಎನ್ನ ಬಿಗಿ ನಿಲ್ಲಿಸಿದ ಮಲೆಗಳ ಮೇಲೂ II


ಕುತಂತ್ರಮಾಡುತಿಹರು ನಿನ್ನ ಪ್ರಜೆಗೆ ವಿರುದ್ಧ I ಆಲೋಚಿಸುತಿಹರು ನಿನ್ನ ಶರಣರಿಗೆ ವಿರುದ್ಧ II


ಸಂಕಟದ ವೇಳೆಯೊಳು ಸ್ವಾಮಿಯನು ನಾ ಕರೆದೆ I ಇರುಳೆಲ್ಲ ಆಯಾಸವರಿಯದೆ ಕೈಚಾಚಿದೆ I ಎನ್ನ ಮನಸ್ಸಿತ್ತು ದುಃಖಶಮನಗೊಳ್ಳದೆ II


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ನನ್ನಿಂದೇಕೆ ಪ್ರಭು, ಅಷ್ಟು ದೂರವಿರುವೆ? I ಕಷ್ಟಕಾಲದಲೇಕೆ ಕಣ್ಮರೆಯಾಗಿರುವೆ? II


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.


ಮುತ್ತಿಗೆಗೆ ತುತ್ತಾದ ನಗರದೊಳಿಂದೆನ್ನ I ಅಚ್ಚರಿಯಿಂದ ರಕ್ಷಿಸಿದೊಡೆಯನಿಗೆ ನಮನ II


ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II


ದೇವಾ, ನೀನೆನಗೆ ಶರಣು ಮಹತ್ತರ I ಶತ್ರುಗೆಟುಕದ ಸುಭದ್ರ ಗೋಪುರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು