Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:6 - ಕನ್ನಡ ಸತ್ಯವೇದವು C.L. Bible (BSI)

6 ಸುತ್ತಲು ನೆರೆದಿಹ ಶತ್ರುಗಳ ನಡುವೆ ತಲೆಯೆತ್ತಿ ನಡೆವೆನು I ದೇವಾಲಯದೊಳು ಜಯಜಯ ಘೋಷದೊಡನೆ ಬಲಿಗಳನರ್ಪಿಸುವೆನು I ಪ್ರಭುವಿಗೆ ಹಾಡುವೆನು, ವಾದ್ಯ ನುಡಿಸುತ ಕೊಂಡಾಡುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರುವದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ ನನ್ನ ತಲೆ ಎತ್ತಲ್ಪಟ್ಟಿರುವದು; ನಾನು ಯೆಹೋವನ ಗುಡಾರದಲ್ಲಿ ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು! ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಗ ನನ್ನ ತಲೆಯು ನನ್ನ ಸುತ್ತಲಿರುವ ನನ್ನ ಶತ್ರುಗಳ ಮೇಲೆ ಎತ್ತಲಾಗಿರುವುದು, ಆದ್ದರಿಂದ ದೇವರ ಗುಡಾರದಲ್ಲಿ ಉತ್ಸಾಹದಿಂದ ಬಲಿಗಳನ್ನು ಅರ್ಪಿಸುವೆನು; ಯೆಹೋವ ದೇವರಿಗೆ ಹಾಡಿ ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:6
38 ತಿಳಿವುಗಳ ಹೋಲಿಕೆ  

ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಸಮರ್ಪಿಸಲಿ ಆತನಿಗೆ ಕೃತಜ್ಞತಾ ಬಲಿಗಳನು I ಹಾಡಿಹೊಗಳಲಿ ಆತನಾ ಮಹತ್ಕಾರ್ಯಗಳನು II


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಶತ್ರುಗಳಿಂದ ನೀನೆನ್ನ ಮುಕ್ತಗೊಳಿಸಿದೆ ಎದುರಾಳಿಗೆ ತಪ್ಪಿಸಿ ನನ್ನನುನ್ನತಿಗೇರಿಸಿದೆ ಹಿಂಸಾತ್ಮಕರಿಂದ ನೀಯೆನ್ನ ಸಂರಕ್ಷಿಸಿದೆ.


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಬನ್ನಿ, ಸ್ತುತಿಗೀತೆ ಹಾಡೋಣ ಬನ್ನಿ, ಪ್ರಭುವಿಗೆ I ಜಯಘೋಷ ಮಾಡೋಣ ನಮ್ಮ ರಕ್ಷಕ ದೇವನಿಗೆ II


ನೀನು ಹೋದಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು.


ಸರ್ವೇಶ್ವರ ಹೀಗೆನ್ನುತ್ತಾರೆ: “ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರಮಾಡಿರಿ. ‘ಸರ್ವೇಶ್ವರ ಆಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು’ ಎಂದು ಘೋಷಿಸುತ್ತಾ ಸ್ತುತಿಸಿರಿ.


ಪ್ರಭುವಿನ ಮಹಿಮೆಯು ಮಹೋನ್ನತ ಎನ್ನುವರು I ಆತನ ಮಾರ್ಗಗಳನು ಹಾಡಿ ಹರಸುವರು II


ತೊರೆಯ ನೀರನು ಕುಡಿವನಾ ಒಡೆಯ I ತಲೆಯೆತ್ತಿ ನಡೆವನು ಗಳಿಸಿ ವಿಜಯ II


ಹಾಡಿರಿ ಶುಭಗೀತೆಯನು ಬಲಪ್ರದನಾದ ದೇವನಿಗೆ I ಮಾಡಿರಿ ಜಯಜಯಕಾರವನು ಯಕೋಬ ಕುಲದೇವನಿಗೆ II


ಸರ್ವ ಜನಾಂಗಗಳೇ, ಚಪ್ಪಾಳೆ ಹೊಡೆಯಿರಿ I ಸರ್ವೇಶ್ವರನಿಗೆ ಜಯಜಯ ಘೋಷ ಮಾಡಿರಿ II


ಹೇ ಪ್ರಭು, ಪರಾಕ್ರಮ ತೋರಿ, ಪರಮಪದಗಳಿಸಿಕೊ I ಕೀರ್ತಿಸುತ ನಿನ್ನ ಸಾಮರ್ಥ್ಯವನು, ಪೊಗಳುವೆನಿದೊ II


ಅರಸಗೆ ಹರ್ಷವಾಯಿತು ಪ್ರಭು, ನೀ ತೋರಿದ ಪರಾಕ್ರಮಕ್ಕಾಗಿ I ಪರಮಾನಂದಗೊಂಡನವನು, ನೀನಿತ್ತ ವಿಜಯೋತ್ಸವಕ್ಕಾಗಿ II


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲೂ ನಿಮಗೆ ನೆಮ್ಮದಿಯನ್ನು ಅನುಗ್ರಹಿಸಿದ್ದಾರೆ. ನಾಡಿನ ಮೂಲ ನಿವಾಸಿಗಳನ್ನು ನನ್ನ ಕೈಗೊಪ್ಪಿಸಿದ್ದಾರೆ. ನೀವೆ ನೋಡುವ ಹಾಗೆ ನಾಡು ಸರ್ವೇಶ್ವರನಿಗೂ ಅವರ ಪ್ರಜೆಗಳಿಗೂ ಸ್ವಾಧೀನವಾಗಿದೆ.


ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ, ಜುದೇಯದ ಅರಸ ಯೆಹೋಯಾಖೀನನು ಸೆರೆಗೆ ಸಿಕ್ಕಿದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಸೆರೆಯಿಂದ ಬಿಡಿಸಿ ಉದ್ಧಾರ ಮಾಡಿದನು.


ಸರ್ವೇಶ್ವರಸ್ವಾಮಿ ದಾವೀದನನ್ನು ಸೌಲನ ಕೈಗೂ ಇತರ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿದರು. ಈ ಕಾರಣ ಅವನು ಸರ್ವೇಶ್ವರಸ್ವಾಮಿಯನ್ನು ಕೀರ್ತಿಸುತ್ತಾ ಈ ಜಯಗೀತೆಯನ್ನು ಹಾಡಿದನು:


ಇನ್ನು ಮೂರು ದಿನಗಳೊಳಗೆ ನೀನು ತಲೆಯೆತ್ತುವಂತೆ ಫರೋಹನು ಮಾಡುವನು; ನಿನ್ನನ್ನು ಮರಳಿ ನೌಕರಿಗೆ ಸೇರಿಸಿಕೊಳ್ಳುವನು; ನೀನು ಮುಂದಿನಂತೆಯೇ ಫರೋಹನಿಗೆ ಪಾನಸೇವಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುವೆ.


ಮೂರನೆಯ ದಿನ ಫರೋಹನು ಹುಟ್ಟಿದ ಹಬ್ಬದಿನವಾಗಿತ್ತು. ಅವನು ತನ್ನ ಪರಿವಾರದವರಿಗೆಲ್ಲ ಔತಣವನ್ನು ಏರ್ಪಡಿಸಿದ್ದ. ಮುಖ್ಯ ಪಾನಸೇವಕನನ್ನೂ ಮುಖ್ಯ ಅಡಿಗೆಭಟ್ಟನನ್ನೂ ಬಿಡಿಸಿ ಬರಮಾಡಿದ, ತನ್ನ ಪರಿವಾರದವರ ಮಧ್ಯದಲ್ಲೆ ಅವರ ತಲೆಯನ್ನು ಎತ್ತಿಸಿದ.


ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II


ಚೇತನಗೊಳ್ಳು ಮನವೇ, ಚೇತನಗೊಳ್ಳು I ಎಚ್ಚರಗೊಳ್ಳಲಿ ವೀಣೆ ತಂಬೂರಿಗಳು I ಎಬ್ಬಿಸಿ ರವಿಯನು ಪ್ರಾತಃಕಾಲದೊಳು II


ಸ್ವೀಕರಿಸು ನಾನು ಉಸುರುವ ಸ್ತುತಿಯರ್ಪಣೆಯನು I ಪ್ರಭೂ, ನನಗೆ ಕಲಿಸು ನಿನ್ನ ವಿಧಿನಿಯಮಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು