Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:8 - ಕನ್ನಡ ಸತ್ಯವೇದವು C.L. Bible (BSI)

8 “ಅರಸೆನ್ನ ಮುಖದರುಶನವನು", ಎಂದೆ ನೀನು I “ಅರಸುವೆನು ಅದನೆ", ಎಂದು ಮರುನುಡಿದೆ ನಾನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ಸಾನ್ನಿಧ್ಯಕ್ಕೆ ಬಾ ಎಂಬ ನಿನ್ನ ಮಾತಿಗೆ ನಾನು - ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬರಲೇ ಬರುವೆನು ಎಂದು ಉತ್ತರ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ನಾನು ನಿನ್ನೊಂದಿಗೆ ಹೃದಯಪೂರ್ವಕವಾಗಿ ಮಾತನಾಡಬೇಕೆಂದಿದ್ದೇನೆ. ದೇವರೇ, ನಾನು ನಿನ್ನ ಸನ್ನಿಧಿಗೆ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮ ಬಗ್ಗೆ ನನ್ನ ಹೃದಯವು ಹೀಗೆ ಹೇಳುತ್ತದೆ: “ದೇವರ ಮುಖವನ್ನು ಹುಡುಕು,” ಆದ್ದರಿಂದ ಯೆಹೋವ ದೇವರೇ, ನಿಮ್ಮ ಮುಖವನ್ನೇ ಹುಡುಕುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:8
12 ತಿಳಿವುಗಳ ಹೋಲಿಕೆ  

ಅರಸಿರಿ ಪ್ರಭುವನೂ ಆತನ ಶಕ್ತಿಯನೂ I ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II


ನಿನ್ನ ಕರುಣೆಯನು ಕೋರಿದೆನು ಮನಸಾರ I ಪ್ರಸನ್ನನಾಗು ನನಗೆ ನಿನ್ನ ನುಡಿಗನುಸಾರ II


ಇಂಥವರೆ ದೇವರ ದರ್ಶನಾಭ್ಯರ್ಥಿಗಳು I ಇಂಥವರೆ ಯಕೋಬ ದೇವನ ಭಕ್ತಾದಿಗಳು II


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.”


ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.


ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನೇ ತಗ್ಗಿಸಿಕೊಂಡು, ನನ್ನ‍ನ್ನು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ನಾಡಿಗೆ ಆರೋಗ್ಯಭಾಗ್ಯವನ್ನು ದಯಪಾಲಿಸುವೆನು.


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ಇದನ್ನು ಕೇಳಿದ ಮರಿಯಳು ತಟ್ಟನೆ ಎದ್ದು ಯೇಸುವನ್ನು ಕಾಣಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು