Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:9 - ಕನ್ನಡ ಸತ್ಯವೇದವು C.L. Bible (BSI)

9 ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನೇ ನನಗೆ ಸಹಾಯಕನಾಗಿದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದು ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನೇ, ನನಗೆ ವಿಮುಖನಾಗಬೇಡ: ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ. ನನ್ನ ದೇವರೇ, ನನ್ನ ರಕ್ಷಕನು ನೀನೇ. ನನ್ನನ್ನು ಕೈ ಬಿಡಬೇಡ! ತೊರೆದುಬಿಡಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ; ನಿಮ್ಮ ಸೇವಕನಾದ ನನ್ನನ್ನು ತಳ್ಳಬೇಡಿರಿ; ನೀವೇ ನನಗೆ ಸಹಾಯಕರಾಗಿದ್ದೀರಿ; ನನ್ನ ರಕ್ಷಕ ಆಗಿರುವ ದೇವರೇ, ನನ್ನನ್ನು ತ್ಯಜಿಸಬೇಡಿರಿ. ನನ್ನನ್ನು ಬಿಟ್ಟುಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:9
23 ತಿಳಿವುಗಳ ಹೋಲಿಕೆ  

ನಿನ್ನ ದಾಸನಿಗೆ ವಿಮುಖನಾಗಬೇಡಯ್ಯಾ I ಆಪತ್ತಿನಲ್ಲಿರುವೆ, ತಡಮಾಡಬೇಡಯ್ಯಾ II


ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II


ಕಷ್ಟಕಾಲದೊಳು ವಿಮುಖನಾಗಬೇಡ ನೀನೆನಗೆ I ಕಿವಿಗೊಡು, ಮೊರೆಯಿಡುವಾಗಲೆ, ಸದುತ್ತರಿಸು ಬೇಗನೆ II


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ಲಭಿಸುವುದಾತನಿಗೆ ಶುಭ ಪ್ರಭುವಿನಿಂದ I ನೀತಿಯ ಸತ್ಫಲ ರಕ್ಷಕ ದೇವನಿಂದ II


ಕೈಗೊಳ್ಳುವೆ ನೀತಿಯುತ ನಿನ್ನಾ ವಿಧಿಗಳನು I ಬಲಾತ್ಕಾರಿಗಳಿಗೊಪ್ಪಿಸಬೇಡ ನನ್ನನ್ನು II


ಪ್ರಭು, ಜೀವೋದ್ಧಾರಕನೇ ಕೇಳು I ನಿನಗೆ ಮೊರೆಯಿಡುವೆ ಹಗಲಿರುಳು II


ತಳ್ಳಬೇಡೆನ್ನನು ದೇವಾ, ನಿನ್ನ ಸನ್ನಿಧಿಯಿಂದ I ದೂಡಬೇಡ ನಿನ್ನ ಪವಿತ್ರಾತ್ಮನನು ನನ್ನಿಂದ II


ಮರೆಸಿಕೊಂಡಿರುವೆಯೇಕೆ ನಿನ್ನ ಮುಖವನು? I ಮರೆತಿರುವೆಯೇಕೆ ನಮ್ಮ ಹಿಂಸೆ ಬಾಧೆಯನು? II


ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? I ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? II


ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಸರ್ವೇಶ್ವರ ಇಲ್ಲಿಯವರೆಗೆ ನಮಗೆ ಸಹಾಯ ಮಾಡಿದರು,” ಎಂದು ಹೇಳಿ ಅದಕ್ಕೆ, ‘ಎಬನೆಜೆರ್’ ಎಂದು ಹೆಸರಿಟ್ಟನು.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಬದಲಿಗೆ, ನಿಮ್ಮ ಅಪರಾಧಗಳೇ ನಿಮ್ಮನ್ನು ಜೀವದಿಂದ ಬೇರ್ಪಡಿಸುತ್ತಾ ಬಂದಿವೆ. ಅವರು ನಿಮಗೆ ಕಿವಿಗೊಡದಂತೆ ನಿಮ್ಮ ಪಾಪಗಳೇ ಅವರನ್ನು ವಿಮುಖರನ್ನಾಗಿ ಮಾಡಿವೆ.


ಹತ್ತಿರ ಬಂದೆನ್ನ ಉದ್ಧರಿಸಯ್ಯಾ I ಶತ್ರುಗಳ ಕೈಯಿಂದ ರಕ್ಷಿಸಯ್ಯಾ II


ಮಾಯವಾಗುತ್ತಿದೆ ನನ್ನೀ ಜೀವಮಾನ ಹೊಗೆಯಂತೆ I ಉರಿಯುತ್ತಿವೆ ಎನ್ನೆಲುಬುಗಳು ಒಲೆಯಲ್ಲಿಟ್ಟ ಕೊರಡಿನಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು