ಕೀರ್ತನೆಗಳು 28:3 - ಕನ್ನಡ ಸತ್ಯವೇದವು C.L. Bible (BSI)3 ದುರುಳರೊಡನೆ ದೂಡಬೇಡ, ದುರ್ಜನರೊಡನೆ ವಿಸರ್ಜಿಸಬೇಡೆನ್ನನು I ಪರರಿಗವರು ನುಡಿವರು ಶಾಂತಿಯನು ಉದರದಲ್ಲಿಡುವರು ಕ್ರೋಧವನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀನು ದುಷ್ಟರೊಡನೆಯೂ ಪಾತಕಿಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೇದಾಗಲಿ ಎಂದು ಹೇಳಿದರೂ ಒಳಗೆ ಕೇಡಾಗಲಿ ಎಂದು ಯೋಚಿಸುವವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ. ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದುಷ್ಟರ ಸಂಗಡವೂ ಅಪರಾಧ ಮಾಡುವವರ ಸಂಗಡವೂ ನನ್ನನ್ನು ಎಳೆಯಬೇಡಿರಿ; ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ; ಆದರೆ ಕೇಡು ಅವರ ಹೃದಯದಲ್ಲಿ ಇದೆ. ಅಧ್ಯಾಯವನ್ನು ನೋಡಿ |