Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 28:7 - ಕನ್ನಡ ಸತ್ಯವೇದವು C.L. Bible (BSI)

7 ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ನನಗೆ ಬಲವೂ ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 28:7
36 ತಿಳಿವುಗಳ ಹೋಲಿಕೆ  

ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II


ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II


ಪ್ರಭುವೆ ತನ್ನ ಪ್ರಜೆಯ ಪ್ರಾಬಲ್ಯವು I ತನ್ನಭಿಷಿಕ್ತನಿಗೆ ಆಶ್ರಯ ದುರ್ಗವು II


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಸಂಕೀರ್ತಿಸುವೆನು ದೇವರ ಶ್ರೀನಾಮವನು I ಕೃತಜ್ಞತೆಯಿಂದಾತನನು ಕೊಂಡಾಡುವೆನು II


ನಿನ್ನಲಿ ಭರವಸೆಯಿತ್ತರು ನಮ್ಮ ಪೂರ್ವಜರು I ಉದ್ಧಾರವಾದರು ನಿನ್ನ ನಂಬಿದವರೆಲ್ಲರು II


ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II


ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II


ಅರಸಗೆ ಹರ್ಷವಾಯಿತು ಪ್ರಭು, ನೀ ತೋರಿದ ಪರಾಕ್ರಮಕ್ಕಾಗಿ I ಪರಮಾನಂದಗೊಂಡನವನು, ನೀನಿತ್ತ ವಿಜಯೋತ್ಸವಕ್ಕಾಗಿ II


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ನೆಮ್ಮದಿಯಿಂದಿದೆ ಎನ್ನ ಮನ ಆತನಲಿ I ನಂಬಿರುವೆವು ಆತನ ಶ್ರೀ ನಾಮದಲಿ II


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ನಿನಗೊಪ್ಪಿಗೆಯಾಗಲಿ ನನ್ನ ಬಾಯಮಾತು, ಹೃದಯಧ್ಯಾನ I ನೀನೆನ್ನ ಪ್ರಭು, ನನಗೆ ಉದ್ಧಾರಕ, ನನಗಾಶ್ರಯಧಾಮ II


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II


ಪ್ರಭು ಮಾಡಿದ ಮಹೋಪಕಾರಗಳಿಗಾಗಿ I ಹಾಡುವೆ ಗೀತವನು ಮನಃಪೂರ್ವಕವಾಗಿ II


ಸಜ್ಜನರ ಜೀವೋದ್ಧಾರ ಪ್ರಭುವಿನಿಂದ I ಆಪತ್ಕಾಲದಲಿ ಆಶ್ರಯ ಆತನಿಂದ II


ನನಗೆ ಕೋಟೆ ನೀನಲ್ಲವೇ? ನನ್ನ ಕೈ ಬಿಟ್ಟಿರುವೆ ಏಕೆ? I ಶತ್ರು ಬಾಧೆಯಿಂದ ಭಿಕಾರಿಯಂತೆ ನಾನಲೆಯಬೇಕೆ? II


ಕಡಲಲ್ಲಿ ಗುಡ್ಡಗಳು ಮುಳುಗಿದರೂ ದಿಗಿಲಿಲ್ಲ I ಪೊಡವಿ ಕಂಪಿಸಿದರು ನಮಗೇನು ಭಯವಿಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು