Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 3:4 - ಕನ್ನಡ ಸತ್ಯವೇದವು C.L. Bible (BSI)

4 ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಯೆಹೋವನಿಗೆ ಮೊರೆಯಿಡುವಾಗ ಆತನು ತನ್ನ ಪರಿಶುದ್ಧಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಯೆಹೋವನಿಗೆ ಪ್ರಾರ್ಥಿಸಲು, ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು, ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 3:4
29 ತಿಳಿವುಗಳ ಹೋಲಿಕೆ  

ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು I ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು II


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು I ಸರ್ವಾಪತ್ತಿನಿಂದವನು ಮುಕ್ತಗೊಂಡನು II


ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.


“ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕ್ಕೆ I ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ II


ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II


ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಪ್ರಭು ಸ್ತುತ್ಯಾರ್ಹನು I ಶತ್ರುಗಳಿಂದ ಕಾಪಾಡುವನು, ನಾನವಗೆ ಮೊರೆಯಿಡಲು II


ಸುತ್ತಲು ನೆರೆದಿಹ ಶತ್ರುಗಳ ನಡುವೆ ತಲೆಯೆತ್ತಿ ನಡೆವೆನು I ದೇವಾಲಯದೊಳು ಜಯಜಯ ಘೋಷದೊಡನೆ ಬಲಿಗಳನರ್ಪಿಸುವೆನು I ಪ್ರಭುವಿಗೆ ಹಾಡುವೆನು, ವಾದ್ಯ ನುಡಿಸುತ ಕೊಂಡಾಡುವೆನು II


ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ಪ್ರಭುವೇ, ಸ್ವರ್ಗಸೇನಾಧೀಶ್ವರನೇ I ನಿನ್ನಲಿ ನಂಬಿಕೆ ಇಡುವವನೇ ಧನ್ಯನು I


ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ: I “ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ I ಪ್ರಜೆಗಳಲೊರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕೆ II


ನನ್ನಾಶ್ರಯವೂ ಕವಚವೂ ನೀನೇ I ನಿರೀಕ್ಷಿಸುತಿರುವೆ ನಿನ್ನ ವಾಕ್ಯವನೆ II


ಜ್ಞಾನವನ್ನು ಸಜ್ಜನರಿಗೆ ಸೇರಿಸಿಡುವನಾತ, ಸನ್ಮಾರ್ಗಿಗಳಿಗೆ ಕವಚವಾಗಿರುವನಾತ.


ನನ್ನ ನಿಟ್ಟುಸಿರಿಗೂ ಮೊರೆಗೂ ಕಿವಿಮುಚ್ಚಿಕೊಳ್ಳಬೇಡ ಎಂದೆ ಆಗ ನೀನು ನನ್ನ ಧ್ವನಿಯನ್ನು ಕೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು