Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 3:5 - ಕನ್ನಡ ಸತ್ಯವೇದವು C.L. Bible (BSI)

5 ಹಾಯಾಗಿ ಮಲಗಿ ನಿದ್ರಿಸುವೆನು I ಸುಖಿಯಾಗಿ ಮರಳಿ ಎದ್ದೇಳುವೆನು I ಕಾಯ್ದು ಕಾಪಾಡುವನು ಪ್ರಭು ನನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ನನ್ನನ್ನು ಕಾಪಾಡುವವನು, ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ನನ್ನನ್ನು ಕಾಪಾಡುವವನಾದ್ದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ನನ್ನನ್ನು ಕಾಪಾಡುವುದರಿಂದ ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ಮಲಗಿ ನಿದ್ರಿಸುವೆನು; ಯೆಹೋವ ದೇವರು ನನ್ನನ್ನು ಕಾಪಾಡಿದ್ದರಿಂದ ನಾನು ಎಚ್ಚರಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 3:5
11 ತಿಳಿವುಗಳ ಹೋಲಿಕೆ  

ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II


ಮಲಗುವಾಗ ನಿನಗೆ ಹೆದರಿಕೆಯಿರದು, ಮಲಗಿದ ಮೇಲೆ ಸುಖನಿದ್ರೆ ಬರುವುದು.


ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.


ನಿಮ್ಮ ನಾಡಿಗೆ ಸುಕ್ಷೇಮವನ್ನು ಅನುಗ್ರಹಿಸುವೆನು. ಯಾರ ಭಯವೂ ಇಲ್ಲದೆ ನೀವು ನಿದ್ರಿಸುವಿರಿ; ದುಷ್ಟಮೃಗಗಳ ಕಾಟ ನಿಮ್ಮ ನಾಡಿಗಿರದು; ನಿಮ್ಮ ನಾಡು ಶತ್ರುಗಳ ಕತ್ತಿಗೆ ತುತ್ತಾಗದು.


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಇದೆ ದೃಢಭರವಸೆ; ಆತನ ಮಕ್ಕಳಿಗೆ ಆಶ್ರಯ ಇದ್ದೇ ಇರುತ್ತದೆ.


ನಮ್ಮ ಪ್ರಾಣವನ್ನಾತ ಉಳಿಸಿದನಯ್ಯಾ I ಕಾಲೆಡವದಂತೆ ಕಾಪಾಡಿದನಯ್ಯಾ II


ಹೆರೋದನು ಪೇತ್ರನನ್ನು ಜನರ ಮುಂದೆ ತರಬೇಕೆಂದಿದ್ದ ಹಿಂದಿನ ರಾತ್ರಿ ಅದು. ಪೇತ್ರನು ಇಬ್ಬರು ಸೈನಿಕರ ನಡುವೆ ನಿದ್ರಿಸುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಪಹರೆಯವರು ಸೆರೆಮನೆಯ ದ್ವಾರದಲ್ಲಿ ಕಾವಲಿದ್ದರು.


ಆತನತ್ತ ತಿರುಗಿದ ಮುಖ ಅರಳುವುದು I ಲಜ್ಜೆಯಿಂದೆಂದಿಗು ಕುಂದಿಹೋಗದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು