Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 30:12 - ಕನ್ನಡ ಸತ್ಯವೇದವು C.L. Bible (BSI)

12 ಎಂದೇ ಮೌನವಿರದೆ ಎನ್ನ ಮನವು ನಿನಗೆ ಹಾಡಲಿ ಕೀರ್ತನೆ I ಹೇ ಪ್ರಭು, ಎನ್ನ ದೇವ, ನಿನಗೆನ್ನ ಅನಂತ ಧನ್ಯ ವಂದನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಮೌನವಾಗಿರದೆ ಸದಾಕಾಲ ನಿನ್ನನ್ನು ಸ್ತುತಿಸುವೆನು. ನನ್ನ ದೇವರಾದ ಯೆಹೋವನೇ, ನಿನ್ನನ್ನು ಸದಾಕಾಲ ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ನನ್ನ ಹೃದಯವು ಮೌನವಿರದೆ ನಿಮ್ಮನ್ನು ಯುಗಯುಗಕ್ಕೂ ಕೊಂಡಾಡುತ್ತಿರುವುದು. ನನ್ನ ದೇವರಾದ ಯೆಹೋವ ದೇವರೇ, ನಾನು ನಿಮ್ಮನ್ನು ಸದಾಕಾಲವೂ ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 30:12
16 ತಿಳಿವುಗಳ ಹೋಲಿಕೆ  

ಹೊಗಳುವೆನು ನಾ ದಿನದಿನವೂ ನಿನ್ನನು I ಭಜಿಸುವೆನೆಂದೆಂದಿಗೂ ನಿನ್ನ ಹೆಸರನು II


ನಿನ್ನಲ್ಲಿಯೇ ದೇವಾ, ಹೆಮ್ಮೆಪಡುವೆವು ಸತತ I ನಿನ್ನ ನಾಮವನೆ ಸಂಕೀರ್ತಿಸುವೆವು ನಿರುತ II


ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ I ಆನಂದಗೊಂಡಿದೆ ಮನ, ಸುರಕ್ಷಿತವಿದೆ ಕಾಯ II


ಅದಕ್ಕೆ ಯೇಸು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗತೊಡಗುವುವು ಎಂಬುದು ನಿಮಗೆ ತಿಳಿದಿರಲಿ,” ಎಂದರು.


ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯನ್ನು ಕುರಿತು ಮೌನದಿಂದಿರಲಾಗದು,” ಎಂದು ಬದಲು ನುಡಿದರು.


ಮಧುರದನಿಗೈವುದು ಎನ್ನಧರ ನಿನ್ನ ಗುಣಗಾನದಲಿ I ನೀನುದ್ಧರಿಸಿದ ಎನ್ನ ಮನ ಭಾಗಿಯಾಗುವುದಾ ಗಾನದಲಿ II


ನಾನಂತು ನಂಬಿರುವೆ ನಿನ್ನ ನಿರಂತರವಾಗಿ I ನಿನ್ನನು ಕೀರ್ತಿಸುತ್ತಿರುವೆ ಅಧಿಕಾಧಿಕವಾಗಿ II


ಚೇತನಗೊಳ್ಳು ಮನವೇ, ಚೇತನಗೊಳ್ಳು I ಎಚ್ಚರಗೊಳ್ಳಲಿ ವೀಣೆ ತಂಬೂರಿಗಳು I ಎಬ್ಬಿಸಿ ರವಿಯನು ಪ್ರಾತಃಕಾಲದೊಳು II


ಪ್ರಭು ಮಾಡಿದ ಮಹೋಪಕಾರಗಳಿಗಾಗಿ I ಹಾಡುವೆ ಗೀತವನು ಮನಃಪೂರ್ವಕವಾಗಿ II


“ಆಮೆನ್‍, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ, ಆಮೆನ್,” ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು.


ನನ್ನ ಮನವೇ, ಒಳಗಾಗಬೇಡ ಅವರ ದುರಾಲೋಚನೆಗೆ ನನ್ನ ಪ್ರಾಣವೇ, ಸೇರಬೇಡ ನೀನವರ ಗುಂಪಿಗೆ ಕೊಂದರವರು ನರರನು ಕೋಪೋದ್ರೇಕದಿಂದ ಊನಪಡಿಸಿದರು ಎತ್ತುಗಳನ್ನು ಮದದಿಂದ.


ಅಲ್ಲಿನ ಯೆಹೂದ್ಯರು ಹರ್ಷಾನಂದ ಪ್ರಭಾವಗಳಿಂದ ಪುಳಕಿತರಾದರು.


ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು