ಕೀರ್ತನೆಗಳು 30:2 - ಕನ್ನಡ ಸತ್ಯವೇದವು C.L. Bible (BSI)2 ‘ಹೇ ಪ್ರಭು, ಎನ್ನ ದೇವಾ ‘ ಎಂದೆ I ನಾ ಮೊರೆಯಿಡೆ, ನೀ ಗುಣಪಡಿಸಿದೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನನ್ನ ದೇವರಾದ ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದಾಗ ನೀನು ನನ್ನನ್ನು ಗುಣಪಡಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನ್ನ ದೇವರಾದ ಯೆಹೋವ ದೇವರೇ, ಸಹಾಯಕ್ಕಾಗಿ ನಿಮಗೆ ಮೊರೆಯಿಡಲು, ನನ್ನನ್ನು ಸ್ವಸ್ಥಮಾಡಿದ್ದೀರಿ. ಅಧ್ಯಾಯವನ್ನು ನೋಡಿ |
ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.