Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 30:3 - ಕನ್ನಡ ಸತ್ಯವೇದವು C.L. Bible (BSI)

3 ಪಾತಾಳದಿಂದೆನ್ನ ಪ್ರಾಣವನು ಮೇಲೆತ್ತಿದೆ I ಎನ್ನ ಬದುಕಿಸಿದೆ ದೇವಾ, ಸಮಾಧಿ ಸೇರಗೊಡದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಗೊಡದೆ ಬದುಕಿಸಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನೇ, ನೀನು ನನ್ನನ್ನು ಸಾವಿನಿಂದ ಬದುಕಿಸಿದೆ; ಪಾತಾಳಕ್ಕೆ ಇಳಿದುಹೋಗದಂತೆ ನನ್ನನ್ನು ಕಾಪಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರೇ, ನನ್ನ ಪ್ರಾಣವನ್ನು ಪಾತಾಳದೊಳಗಿಂದ ಎತ್ತಿದ್ದೀರಿ; ನಾನು ಸಮಾಧಿ ಸೇರದ ಹಾಗೆ ನನ್ನನ್ನು ಬದುಕಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 30:3
13 ತಿಳಿವುಗಳ ಹೋಲಿಕೆ  

ನೀನೆನಗೆ ತೋರಿಸಿರುವ ಕರುಣೆ ಮಹತ್ತರವಾದುದಯ್ಯಾ I ಪಾತಾಳದಿಂದ ನನ್ನ ಪ್ರಾಣವನು ಉಳಿಸಿದೆಯಯ್ಯಾ II


ನನ್ನ ಮೊರೆ ಕೇಳು ಪ್ರಭು, ದುರ್ಗ ನೀನೆನಗೆ I ನೀ ಕಿವಿಗೊಡದಿರೆ, ನಾ ಸಮಾನ ಸತ್ತವರಿಗೆ II


ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II


ತಪ್ಪಿಸಿಹನು ಮರಣಕೆ ನಾನೀಡಾಗದಂತೆ I ಸಂತೈಸಿಹನು ಕಂಬನಿಯ ನಾ ಸುರಿಸದಂತೆ I ಕಾಪಾಡಿಹನು ಕಾಲೆಡವಿ ನಾ ಬೀಳದಂತೆ II


ದೇವಾ, ಈಡು ಮಾಡಿದೆಯೆನ್ನನು ಕಷ್ಟಸಂಕಟಗಳಿಗೆ I ಪುನಶ್ಚೇತನಗೊಳಿಸೀಗ, ಭೂತಳದಿಂದೆತ್ತು ಮೇಲಕೆ II


ವಿಮೋಚಿಸಿದ್ದಾನೆ ನನ್ನ ಆತ್ಮ ಅಧೋಲೋಕ ಸೇರದಂತೆ ನನ್ನ ಜೀವವು ಜ್ಯೋತಿಯನು ಕಾಣುವಂತೆ.’


ಗುಣಪಡಿಸಿದನವರನು ತನ್ನ ವಾಣಿಯಿಂದ I ತಪ್ಪಿಸಿದನು ಅವರನು ವಿನಾಶಕೂಪದಿಂದ II


ಸರ್ವೇಶ್ವರಾ, ಮಾನವನ ಜೀವನ ಇಂತಿದೆ, ಇವುಗಳಿಂದಲೇ ನನ್ನ ಆತ್ಮ ಚೇತನಗೊಳ್ಳುತಿದೆ, ನೀನೀಗ ಗುಣಪಡಿಸು, ನಾ ಬಾಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು