Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 30:5 - ಕನ್ನಡ ಸತ್ಯವೇದವು C.L. Bible (BSI)

5 ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವದು; ಸಂಜೆಗೆ ದುಃಖವೆಂಬದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ ಮುಂಜಾನೆ ಹರ್ಷಧ್ವನಿಯು ಕೇಳಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆತನ ಕೋಪವು ಕ್ಷಣಮಾತ್ರವಿರುವುದು. ಆತನ ಪ್ರೀತಿಯಾದರೋ ಶಾಶ್ವತವಾದದ್ದು. ನಾನು ಸಂಜೆಯಲ್ಲಿ ದುಃಖದಿಂದ ಮಲಗಿಕೊಂಡರೂ ಮುಂಜಾನೆ ಹರ್ಷದಿಂದ ಎಚ್ಚರಗೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರ ಕೋಪವು ಕ್ಷಣಮಾತ್ರವೇ; ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ; ರಾತ್ರಿಯಲ್ಲಿ ದುಃಖ ಬಂದಿದ್ದರೂ; ಬೆಳಿಗ್ಗೆ ಆನಂದವು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 30:5
28 ತಿಳಿವುಗಳ ಹೋಲಿಕೆ  

ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು.


ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.


ಆತನು ಸದಾ ತಪ್ಪು ಹುಡುಕುವವನಲ್ಲ I ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ II


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ಪ್ರಾಣಕ್ಕಿಂತ ಮಿಗಿಲಾದುದು ನಿನ್ನಚಲ ಪ್ರೀತಿ I ಎಡೆಬಿಡದೆ ಮಾಳ್ಪುದು ನನ್ನೀ ತುಟಿ ನಿನ್ನ ಸ್ತುತಿ II


ನಾನಾದರೊ ಹೊಗಳಿ ಹಾಡುವೆ ದೇವಾ, ನಿನ್ನ ಸಾಮರ್ಥ್ಯವನು I ಉದಯಕಾಲದಲೆ ನಾ ಸಂಕೀರ್ತಿಸುವೆ ನಿನ್ನ ಪ್ರೀತಿ ಪ್ರೇಮವನು I ಸಂಕಟದಲ್ಲೆನಗಾದ ಆಶ್ರಯಗಿರಿ, ದುರ್ಗ, ನೀನಲ್ಲವೇನು? II


ದೇವನಿರುವನಾ ನಗರ ಮಧ್ಯೆ, ಅಳಿವಿಲ್ಲ ಅದಕೆ I ಉದಯಕಾಲದಲೆ ದೇವ ಬರುವನು ಅದರ ಸಹಾಯಕೆ II


ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ಯಕೋಬನು ಒಂಟಿಗನಾಗಿ ಹಿಂದೆ ನಿಂತಿದ್ದನು, ಯಾರೋ ಒಬ್ಬ ಪುರುಷ ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


ದೇವನು ಭೂಮಂಡಲಕ್ಕೆಲ್ಲಾ ಒಡೆಯನು I ಕೀರ್ತನೆಯಿಂದ ಕೊಂಡಾಡಿರಿ ಆತನನು II


ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ I ಆತನ ಶ್ರೀನಾಮವನು ಕೊಂಡಾಡಿರಿ II


ಪ್ರಭು, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು I ಕೊಂಡಾಡುವುದು ನಿನ್ನನು ಭಕ್ತ ಸಮೂಹವು II


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು