Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 30:6 - ಕನ್ನಡ ಸತ್ಯವೇದವು C.L. Bible (BSI)

6 ನಾನಾದರೋ ಉಲ್ಲಾಸದಿಂದಿರುವಾಗಲೂ I ನನ್ನನು ಅಲ್ಲಾಡಿಸಲಾಗದೆಂದೆ ಯಾರಿಂದಲೂ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನಂತೂ ಸುಖದಿಂದಿದ್ದಾಗ - ನನಗೆ ಎಂದಿಗೂ ಚಲನವೇ ಇಲ್ಲವೆಂದು ಹೇಳಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಸುರಕ್ಷಿತವಾಗಿದ್ದಾಗ ನನಗೆ ಕೇಡೇ ಇಲ್ಲವೆಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಸುರಕ್ಷಿತನಾಗಿದ್ದಾಗ, “ನಾನೆಂದೂ ಕದಲುವುದಿಲ್ಲ,” ಎಂದು ಹೇಳಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 30:6
12 ತಿಳಿವುಗಳ ಹೋಲಿಕೆ  

ನನಗಾಧಾರವಾಗಿರು ಸುರಕ್ಷಿತನಾಗಿರುವೆ I ನಿನ್ನಾ ನಿಬಂಧನೆಗಳಿಗೆ ಸದಾ ಗಮನ ಕೊಡುವೆ II


ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.


ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.”


ನನ್ನ ಜನರ ಹಿಂಸೆಬಾಧೆಗಳನ್ನು ಗಮನಿಸದೆ ಬರಲಿರುವ ಪರಿಣಾಮವನ್ನು ನೆನೆಸಿಕೊಳ್ಳದೆ ನೀನೇ ಶಾಶ್ವತ ರಾಣಿಯೆಂದು ಮೆರೆದೆ.


ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II


ನೆನೆವನು ಮನದೊಳು ದುರುಳನಿಂತು: I “ಯಾರಿಗೂ ನನ್ನ ಕದಲಿಸಲಾಗದು I ಬಾರದು ನನಗೆಂದಿಗು ಆಪತ್ತು” II


ದುಃಖಿಸುತ್ತಾ ಬೀಜಬಿತ್ತಲು ಹೋದವನು I ಹರ್ಷಿಸುತ್ತಾ ಕೊಯ್ದು ತರುವನು ತೆನೆಗಳನು II


“ಬಿಟ್ಟಿದ್ದೆನು ನಿನ್ನನು ಕ್ಷಣಮಾತ್ರ ಪ್ರೀತಿಯಿಂದ ಸೇರಿಸಿಕೊಳ್ಳುವೆ ಹತ್ತಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು