Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 30:7 - ಕನ್ನಡ ಸತ್ಯವೇದವು C.L. Bible (BSI)

7 ಪ್ರಭು, ನಿನ್ನ ಕೃಪೆ ನನ್ನ ಗುಡ್ಡಕ್ಕೆ ಅಡಿಬಂಡೆ I ನಿನ್ನ ಮುಖ ಮರೆಯಾದುದೆ ನಾ ಕಳವಳಗೊಂಡೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ, ನಾನು ನಿನ್ನ ಕೃಪೆಗೆ ಪಾತ್ರನಾಗಿದ್ದಾಗ ನನ್ನನ್ನು ಯಾವುದೂ ಸೋಲಿಸಲಾರದು ಎಂದುಕೊಂಡೆನು. ಆದರೆ ನೀನು ನನಗೆ ವಿಮುಖನಾದಾಗ ಭಯದಿಂದ ನಡುಗತೊಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರೇ, ನಿಮ್ಮ ದಯೆಯಿಂದ ನನ್ನ ರಾಜ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀರಿ ಆದರೆ ನೀವು ನಿಮ್ಮ ಮುಖವನ್ನು ಮರೆಮಾಡಲು ನಾನು ಕಳವಳಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 30:7
16 ತಿಳಿವುಗಳ ಹೋಲಿಕೆ  

ತಲ್ಲಣಗೊಳ್ಳುವುವು ನೀ ಮುಖ ಮರೆಮಾಡಿಕೊಳ್ಳಲು I ಮಣ್ಣುಪಾಲಾಗುವುವು ನೀನವುಗಳ ಉಸಿರನಡಗಿಸಲು II


ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II


ಅವರ ಶಕ್ತಿಸಾಮರ್ಥ್ಯದ ಪ್ರತಿಭೆ ನಿನ್ನದೆ I ನಿನ್ನ ದಯೆಯಿಂದ ನಮಗೆ ಕೋಡುಮೂಡಿದೆ II


ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ I ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ II


ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ಜೀವವಿತ್ತು ಅಚಲ ಪ್ರೀತಿ ತೋರಿಸಿದೆ ನಿನ್ನ ಪರಾಮರಿಕೆಯಿಂದ ನನ್ನ ಪ್ರಾಣವನ್ನು ಕಾಪಾಡಿದೆ.


ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.


ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.


ನಿನ್ನ ಕೋಪತಾಪಗಳೆ ಕಾರಣ ಇದಕ್ಕೆಲ್ಲಾ I ನನ್ನನು ಮೇಲಕ್ಕೆತ್ತಿ ಬಿಸಾಡಿಬಿಟ್ಟಿರುವೆಯಲ್ಲಾ II


ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ನನ್ನಿಂದೇಕೆ ಪ್ರಭು, ಅಷ್ಟು ದೂರವಿರುವೆ? I ಕಷ್ಟಕಾಲದಲೇಕೆ ಕಣ್ಮರೆಯಾಗಿರುವೆ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು