Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:10 - ಕನ್ನಡ ಸತ್ಯವೇದವು C.L. Bible (BSI)

10 ಕರಗುತ್ತಿದೆ ಬದುಕು ತಾಪದಲಿ; ಕುಂದುತ್ತಿದೆ ಶಕ್ತಿ ಪಾಪದಲಿ I ಸವೆದು ಹೋಗುತ್ತಿವೆ ನನ್ನ ದೇಹದೆಲುಬುಗಳು ಕಾಲ ಚಕ್ರದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ, ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ; ನನ್ನ ಸಂಕಟಗಳಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಸವೆದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ; ನನ್ನ ಅಪರಾಧದಿಂದ ನನ್ನ ಶಕ್ತಿಯು ಕುಂದಿಹೋಯಿತು; ನನ್ನ ಎಲುಬುಗಳು ಸವೆದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಜೀವಿತವು ದುಃಖದಲ್ಲಿ ಕೊನೆಗೊಳ್ಳುತ್ತಿದೆ. ನನ್ನ ವರ್ಷಗಳು ನಿಟ್ಟುಸಿರಿನಲ್ಲೇ ಕಳೆದುಹೋಗುತ್ತಿವೆ. ನನ್ನ ಇಕ್ಕಟ್ಟುಗಳು ನನ್ನ ಶಕ್ತಿಯನ್ನು ಕುಂದಿಸುತ್ತಿವೆ. ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಜೀವವು ಚಿಂತೆಯಿಂದಲೂ, ನನ್ನ ವರ್ಷಗಳು ನಿಟ್ಟುಸಿರಿನಿಂದಲೂ ಕಳೆದುಹೋಗಿವೆ; ನನ್ನ ಅಪರಾಧದಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಕ್ಷೀಣವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:10
12 ತಿಳಿವುಗಳ ಹೋಲಿಕೆ  

ಬಾಲ್ಯದಿಂದಲು ಬಾಧಿತನು, ಮೃತಪ್ರಾಯನು I ನಿನ್ನ ದಂಡನೆ ಸಹಿಸಿ ಸೊರಗಿದವನು ನಾನು II


ನನ್ನ ದೇಹದಲ್ಲಿಲ್ಲ ಸೌಖ್ಯ ನಿನ್ನ ಕೋಪದ ನಿಮಿತ್ತ I ನನ್ನೆಲುಬಿನಲ್ಲಿಲ್ಲ ಕ್ಷೇಮ ನನ್ನ ಪಾಪದ ಪ್ರಯುಕ್ತ II


ಇದು ಸುಳ್ಳಲ್ಲ, ಕ್ರಿಸ್ತಯೇಸುವಿನಲ್ಲಿ ಸತ್ಯವಾಗಿಯೇ ಹೇಳುತ್ತಿದ್ದೇನೆ. ಪವಿತ್ರಾತ್ಮಾಧೀನವಾಗಿರುವ ನನ್ನ ಮನಸ್ಸೇ ಇದಕ್ಕೆ ಸಾಕ್ಷಿಯಾಗಿದೆ.


ಆರಿಸಿದನು ಊದಿ ಅವರ ಬಾಳ ಹಣತೆಯನು I ಬರಮಾಡಿದನು ಅವರಿಗೆ ಭೀಕರ ಮರಣವನು II


ಪಾಪದ ಪ್ರಯುಕ್ತ ಮಾನವನು ಶಿಕ್ಷಿಸುವಾಗ I ನುಸಿಹತ್ತಿದಂತೆ ನಾಶಪಡಿಸುವೆ ಅವನಾಸ್ಥೆಯನಾಗ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ II


ಎನಿತುಕಾಲ ನಾ ಚಿಂತೆಯಿಂದಿರಬೇಕು? I ದಿನವೆಲ್ಲಾ ಮನದಲ್ಲಿ ನೊಂದಿರಬೇಕು? I ನನ್ನ ಮೇಲೆ ವೈರಿ ದೊರೆತನ ಮಾಡಬೇಕು? II


ನಿಟ್ಟುಸಿರೇ ನನ್ನ ಮುಂದಿರುವ ಊಟ ಜಲಧಾರೆಯಂತಿದೆ ನನ್ನ ನರಳಾಟ.


ವೃದ್ಧಾಪ್ಯದಲಿ ನನ್ನ ತಳ್ಳಿಬಿಡಬೇಡಯ್ಯಾ I ಶಕ್ತಿ ಕುಂದುತ್ತಿರುವಾಗ ಕೈಬಿಡಬೇಡಯ್ಯಾ II


ದುರ್ಜನರೇ ತೊಲಗಿರಿ ನನ್ನಿಂದ ದೂರ I ಪ್ರಭುವಿನ ಕಿವಿಮುಟ್ಟಿದೆ ನನ್ನಾರ್ತ ಸ್ವರ II


ಪ್ರಭೂ, ನಿನಗೆ ಮೊರೆಯಿಡುವೆನು I ಕರುಣಿಸೆನಗೆ ಸದುತ್ತರವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು