Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:11 - ಕನ್ನಡ ಸತ್ಯವೇದವು C.L. Bible (BSI)

11 ಶತ್ರುಗಳ ದೂಷಣೆಗೆ ಗುರಿಯಾದೆ, ನೆರೆಯವರಿಗೆ ನಿಂದಾಸ್ಪದನಾದೆ I ಮಿತ್ರರೂ ಬೆದರುವಂತಾದೆ; ದಾರಿಹೋಕರು ದೂರವಾಗುವಂತಾದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು; ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ವೈರಿಗಳೆಲ್ಲರ ನಿಮಿತ್ತವಾಗಿ ನನ್ನ ನೆರೆಯವರಿಗೆ ನಾನು ನಿಂದೆಯೂ, ಮಿತ್ರರಿಗೆ ಹೆದರಿಕೆಯೂ ಆಗಿದ್ದೇನೆ; ದಾರಿಯಲ್ಲಿ ನನ್ನನ್ನು ಕಂಡವರು ನನ್ನನ್ನು ಬಿಟ್ಟು ಓಡಿಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:11
24 ತಿಳಿವುಗಳ ಹೋಲಿಕೆ  

ನನ್ನ ಜಾಡ್ಯ ನೋಡಿ ದೂರ ಸರಿದರು ನೆಂಟರಿಷ್ಟರು I ಬಳಿಬಾರದೆ ಅಲ್ಲೇ ನಿಂತರು ಬಂಧು ಬಳಗದವರು II


ಆಪ್ತರೂ ಹೇಸಿ ದೂರಸರಿವಂತೆ ಮಾಡಿರುವೆ I ಬಂಧಿತನಾದ ನಾನು ಬಿಡಿಸಿಕೊಳ್ಳಲಾಗದಿರುವೆ II


ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು.


ಬಂಧುಮಿತ್ರರನು ನನ್ನಿಂದ ದೂರ ಮಾಡಿರುವೆ I ಅಂಧಕಾರದೊಡನೆ ಸಂಗಾತಿಯನ್ನಾಗಿಸಿರುವೆ II


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ನಾಲಿಗೆ ನಿಮಿತ್ತ ಅವರು ಅವನತಿಗೀಡಾಗುವರು I ನೋಡುವವರೆಲ್ಲರು ತಲೆಯಾಡಿಸಿ ಅಣಕಿಸುವರು II


ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.


ಅಂತೆಯೇ ನಾವು ಅವರ ನಿಮಿತ್ತ ನಮಗೆ ಬರುವ ನಿಂದೆ ಅವಮಾನಗಳನ್ನು ಹೊತ್ತು ನಮ್ಮ ಪಾಳೆಯದಿಂದಾಚೆ ಅವರ ಬಳಿಗೆ ಹೋಗೋಣ.


ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು, ಸೆರೆಸಂಕಲೆಗಳನ್ನು ಅನುಭವಿಸಿದರು.


ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ.


ಕ್ರಿಸ್ತಯೇಸು ತಮ್ಮ ಸ್ವಂತ ಹಿತವನ್ನು ಎಂದಿಗೂ ಬಯಸಲಿಲ್ಲ. “ದೇವರೇ, ನಿಮ್ಮನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಎರಗಿವೆ,” ಎಂದು ಲಿಖಿತವಾಗಿರುವ ವಾಕ್ಯ ಅವರಿಗೆ ಅನ್ವಯಿಸುತ್ತದೆ.


ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನ ಮಾಡಿದರು.


ಆಗ ಪೇತ್ರನು ತನ್ನನ್ನೇ ಶಪಿಸಿಕೊಳ್ಳಲಾರಂಭಿಸಿ, “ಆ ಮನುಷ್ಯನನ್ನು ನಾನು ಖಂಡಿತವಾಗಿ ಅರಿಯೆನು,” ಎಂದು ಆಣೆಯಿಟ್ಟು ಹೇಳಿದನು.


ಮಗನು ತಂದೆಯನ್ನು ತುಚ್ಛೀಕರಿಸುವನು; ಮಗಳು ತಾಯಿಗೆ ಎದುರಾಗಿರುವಳು; ಸೊಸೆ ಅತ್ತೆಯೊಂದಿಗೆ ಜಗಳವಾಡುವಳು. ಹೀಗೆ ಮನುಷ್ಯನಿಗೆ ತನ್ನ ಮನೆಯವರೇ ವೈರಿಗಳಾಗುವರು.


ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”


ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು