Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:13 - ಕನ್ನಡ ಸತ್ಯವೇದವು C.L. Bible (BSI)

13 ನನಗೆ ವಿರುದ್ಧ ಜನರಾಡುವ ಗುಸುಗುಸು ಮಾತು ಕೇಳಿ ಬರುತಿದೆ I ಭಯಭೀತಿ ಎನ್ನನಾವರಿಸಿದೆ, ಒಳಸಂಚು, ಪ್ರಾಣಹರಣ ನಡೆಯುತಿವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ. ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತಲೂ ಅಂಜಿಕೆ ಇದೆ; ಅನೇಕರು ನನ್ನ ಪ್ರಾಣವನ್ನು ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:13
21 ತಿಳಿವುಗಳ ಹೋಲಿಕೆ  

ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಬೆಳಗಾಯಿತು. ಎಲ್ಲ ಮುಖ್ಯಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆಮಾಡಿದರು.


ಸುತ್ತಮುತ್ತಲೂ ದಿಗಿಲು ಹುಟ್ಟಿಸುವ ನನ್ನ ಹಗೆಗಳನ್ನೆ ಕರೆಸಿದೆಯಲ್ಲಾ ಹಬ್ಬಕ್ಕೋ ಎಂಬಂತೆ ! ಸರ್ವೇಶ್ವರನ ಪ್ರಕೋಪದ ದಿನದಂದು ತಪ್ಪಿಸಿಕೊಳ್ಳಲಿಲ್ಲ ಯಾರೂ; ಉಳಿಯಲಿಲ್ಲ ಯಾರೂ. ಶತ್ರು ಸಂಹರಿಸಿಬಿಟ್ಟನಲ್ಲಾ ನಾನು ಸಾಕಿ ಆರೈಕೆ ಮಾಡಿದವರನ್ನೂ !


ಕೂಡಲೆ ಸೌಲನು ಅವನನ್ನು ತಿವಿಯುವವನಂತೆ ಈಟಿಯನ್ನೆಸೆದನು. ತನ್ನ ತಂದೆ ನಿಜವಾಗಿಯೂ ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನನಿಗೆ ಅರಿವಾಯಿತು.


ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು.


ಇತ್ತ ಮುಖ್ಯಯಾಜಕರೂ ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಸುಳ್ಳುಸಾಕ್ಷಿಯನ್ನು ಹುಡುಕುತ್ತಿದ್ದರು.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.


ಊರ ಹೊರಗೆ ಹೋಗುವಂತಿಲ್ಲ, ದಾರಿಯಲ್ಲಿ ನಡೆಯುವಂತಿಲ್ಲ. ಸುತ್ತಮುತ್ತಲೂ ಶತ್ರುವಿನ ಕತ್ತಿ, ಎಲ್ಲೆಲ್ಲೂ ದಿಗಿಲು ಎಂದರೆ ದಿಗಿಲು!”


ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II


ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ಗೋಡೆ ಸುತ್ತಲೂ ತಿರುಗುತಿಹರವರು ಹಗಲಿರುಳು I ನಗರದೊಳಗೆ ತುಂಬಿವೆ ಅಕ್ರಮ ಅನಾಚಾರಗಳು II


“ನಿಮಗೆ ನಾನು ಕೇಡುಮಾಡಬೇಕೆಂದಿದ್ದೇನೆಂದು ಹೇಳುವವರ ಮಾತಿಗೆ ನೀವು ಕಿವಿಗೊಡಬೇಡಿ.


ಆದರೆ ಮುಖ್ಯ ಪಾನಸೇವಕನು ಜೋಸೆಫನನ್ನು ನೆನಪಿಗೆ ತಂದುಕೊಳ್ಳಲಿಲ್ಲ, ಅವನನ್ನು ಮರೆತೇಬಿಟ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು