Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:18 - ಕನ್ನಡ ಸತ್ಯವೇದವು C.L. Bible (BSI)

18 ಸೇದಿಹೋಗಲಿ ಸಜ್ಜನರ ವಿರುದ್ಧ ಸುಳ್ಳಾಡುವ ನಾಲಿಗೆ I ಬಿದ್ದುಹೋಗಲಿ, ಸೊಕ್ಕಿನಿಂದವರನು ಧಿಕ್ಕರಿಸುವ ನಾಲಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ ಕೊಬ್ಬಿನಿಂದಲೂ ಅವರಿಗೆ ವಿರೋಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಕೆಡುಕರು ಜಂಬಕೊಚ್ಚಿಕೊಳ್ಳುತ್ತಾ ಒಳ್ಳೆಯವರ ಬಗ್ಗೆ ಸುಳ್ಳು ಹೇಳುವರು. ಅವರು ದುರಹಂಕಾರಿಗಳಾಗಿದ್ದಾರೆ; ಅವರ ಸುಳ್ಳುತುಟಿಗಳು ಮೌನಗೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ, ಕಠಿಣವಾಗಿಯೂ ಮಾತನಾಡುವ ಸುಳ್ಳಿನ ತುಟಿಗಳು ಮೌನವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:18
22 ತಿಳಿವುಗಳ ಹೋಲಿಕೆ  

ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.


ಉಬ್ಬಿಹೋಗಿಹರು ಕೆಡುಕರೆಲ್ಲರು I ಜಂಬ ಕೊಚ್ಚಿಕೊಳ್ಳುತ್ತಿಹರು ಅವರು II


ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಪೌಲನು ಅಲ್ಲಿಗೆ ಬಂದಾಗ, ಜೆರುಸಲೇಮಿನಿಂದ ಆಗಮಿಸಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತು ಅವನ ವಿರುದ್ಧ ಹಲವಾರು ತೀವ್ರ ಆಪಾದನೆಗಳನ್ನು ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಂದಾಗಲಿಲ್ಲ.


ಆಗ ಯೆಹೂದ್ಯರಲ್ಲಿ ಕೆಲವರು ಯೇಸು ಸ್ವಾಮಿಗೆ, “ನೀನು ಸಮಾರಿಯದವನು. ದೆವ್ವಹಿಡಿದವನು, ಎಂದು ನಾವು ಹೇಳಿದ್ದು ಸರಿಯಾಗಿದೆ ಅಲ್ಲವೆ?” ಎಂದರು.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಆದರೆ ಫರಿಸಾಯರು ಇದನ್ನು ಕೇಳಿದಾಗ, “ಇವನು ದೆವ್ವಗಳನ್ನು ಬಿಡಿಸುತ್ತಿರುವುದು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದಲೇ,” ಎಂದರು.


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಸತ್ಯವಾದಿಯ ಮಾತು ಶಾಶ್ವತ; ಮಿಥ್ಯವಾದಿಯ ಮಾತು ಕ್ಷಣಿಕ.


ಬಿಡಿಸೆನ್ನನು ಪ್ರಭು ಸುಳ್ಳುಬಾಯಿಂದ I ವಂಚಿಸುವ ನಾಲಿಗೆ ಉಳ್ಳವರಿಂದ II


ಹರ್ಷಿಸುವನು ರಾಜಾಧಿರಾಜನು ದೇವನಲಿ I ಸಂತೋಷಿಸುವರು ಆಣೆಯಿಟ್ಟವರು ಆತನಲಿ I ಸದ್ದಿಲ್ಲದಂತಾಗ್ವುದು ಸುಳ್ಳಾಡಿದ ಬಾಯಿ ಅಲ್ಲಿ II


ಪಾಪವಿದೆ ಬಾಯಲಿ, ದೋಷವಿದೆ ತುಟಿಯಲಿ I ಸುಳ್ಳಿದೆ ಮಾತಲಿ, ಶಾಪವಿದೆ ನುಡಿಯಲಿ I ಅವರ ಸೊಕ್ಕಿನಲಿ ಅವರೇ ಸಿಕ್ಕಬೀಳಲಿ II


ಕಪಟವಾಡುವ ತುಟಿಗಳನು ಪ್ರಭು ಕಡಿದುಬಿಡಲಿ I ಬಡಾಯಿಕೊಚ್ಚುವ ಜಿಹ್ವೆಯನು ಕತ್ತರಿಸಿಬಿಡಲಿ II


ದೇವರಾದ ಸರ್ವೇಶ್ವರನಿಗೂ ಅವರ ಸೇವಕನಾದ ಹಿಜ್ಕೀಯನಿಗೂ ವಿರೋಧವಾದ ಈ ಮೊದಲಾದ ಮಾತುಗಳನ್ನು ಸನ್ಹೇರೀಬನು ತನ್ನ ಸೇವಕರ ಮುಖಾಂತರ ಹೇಳಿಕಳುಹಿಸಿದ್ದನು;


ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”


ಆಗಲಿ ಆಶಾಭಂಗ ನಿನ್ನೆದುರಾಳಿಗಳಿಗೆ I ಹಾಗಾಗದಿರಲಿ ನಿನ್ನ ನಿರೀಕ್ಷಿಸುವವರಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು