Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:19 - ಕನ್ನಡ ಸತ್ಯವೇದವು C.L. Bible (BSI)

19 ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ, ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ. ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿಮ್ಮ ಒಳ್ಳೆಯತನವು ಎಷ್ಟೋ ಸಮೃದ್ಧ; ನೀವು ನಿಮಗೆ ಭಯಪಡುವವರಿಗೋಸ್ಕರ ಆ ಒಳ್ಳೆಯತನವನ್ನಿಟ್ಟಿದ್ದೀರಿ, ನಿಮ್ಮನ್ನು ಆಶ್ರಯಿಸಿಕೊಳ್ಳುವವರಿಗೆ ನೀವು ನಿಮ್ಮ ಒಳ್ಳೆಯತನವನ್ನು ಎಲ್ಲರ ಮುಂದೆ ದಯಪಾಲಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:19
24 ತಿಳಿವುಗಳ ಹೋಲಿಕೆ  

ಪವಿತ್ರಗ್ರಂಥದಲ್ಲಿ ಹೇಳಿರುವಂತೆ : “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.”


ತಮ್ಮನ್ನು ಕಾದು ಎದುರುನೋಡುವವರ ಪರವಾಗಿ ಕಾರ್ಯಗತರಾಗುವಂಥ ದೇವರು, ನಿಮ್ಮನ್ನು ಬಿಟ್ಟರೆ, ಯಾರಿದ್ದಾರೆ? ಅಂಥಾ ದೇವರನ್ನು ಲೋಕಾದಿಯಿಂದ ಯಾರೂ ಕಂಡಿಲ್ಲ, ಅಂಥವರು ಯಾರ ಕಿವಿಗೂ ಬೀಳಲಿಲ್ಲ, ಯಾವ ಕಣ್ಣಿಗೂ ಕಾಣಿಸಲಿಲ್ಲ.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II


ಈ ಸುಸ್ಥಿತಿಗಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾರೆ. ಇದಕ್ಕೆಲ್ಲಾ ಖಾತರಿಯಾಗಿ ಪವಿತ್ರಾತ್ಮರನ್ನೇ ನಮಗೆ ದಯಪಾಲಿಸಿದ್ದಾರೆ.


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಸತ್ಯಸಂಧನಾದರೋ ಬೆಳಕಿನ ಬಳಿಗೆ ಬರುತ್ತಾನೆ. ತಾನು ಮಾಡುವುದು ದೇವರು ಮೆಚ್ಚುವುದನ್ನೇ ಎಂಬುದನ್ನು ತೋರ್ಪಡಿಸುತ್ತಾನೆ.


ದೇವನು ಎನಿತೋ ಒಳ್ಳೆಯವನು ಇಸ್ರಯೇಲಿಗೆ I ದಯಾಪರನಾತನು ಶುದ್ಧಹೃದಯಿಗಳಿಗೆ II


ಸರ್ವೇಶ್ವರಾ, ನೀಡೆಮಗೆ ಶಾಂತಿ ಸಮಾಧಾನ ನಮ್ಮ ಸತ್ಕಾರ್ಯಗಳೆಲ್ಲವೂ ನಿನ್ನ ಕೃಪಾಸಾಧನ.


ನಿನ್ನ ಶಕ್ತಿಸಾಮರ್ಥ್ಯವನು ಹೇ ದೇವಾ, ಪ್ರದರ್ಶಿಸು I ನಮ್ಮ ಪರ ಪ್ರಯೋಗಿಸಿದ ಬಲವನು ಮರಳಿ ತೋರ್ಪಡಿಸು II


ಇಲ್ಲ, ದೇವರ ಕರುಣೆ ಹಾಗೂ ಕಠಿಣತೆಯನ್ನು ಗಮನಿಸು. ಬಿದ್ದವರತ್ತ ಕಾಠಿಣ್ಯವನ್ನೂ ನಿನ್ನತ್ತ ಕರುಣೆಯನ್ನೂ ತೋರಿಸಿದ್ದಾರೆ. ನೀನು ಅವರ ಕರುಣೆಯನ್ನು ಆಶ್ರಯಿಸಿ ನಡೆಯಬೇಕು. ಇಲ್ಲವಾದರೆ ನಿನ್ನನ್ನು ಆ ರೆಂಬೆಗಳಂತೆ ಕಡಿದುಹಾಕಲಾಗುತ್ತದೆ.


ಸೆರೆಯಾಳುಗಳಿಗೆ ಸಂತಾಪ ತೋರಿಸಿದಿರಿ, ನಿಮ್ಮ ಸೊತ್ತನ್ನು ಸುಲಿಗೆಮಾಡಿದಾಗ ಸಂತೋಷದಿಂದ ಬಿಟ್ಟುಕೊಟ್ಟಿರಿ. ಏಕೆಂದರೆ, ಇದಕ್ಕೂ ಶ್ರೇಷ್ಠವಾದ ಹಾಗೂ ಶಾಶ್ವತವಾದ ಸೊತ್ತು ನಿಮಗಿದೆಯೆಂದು ಚೆನ್ನಾಗಿ ಅರಿತಿದ್ದಿರಿ.


ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯಧರ್ಮೀಯರ ಮಧ್ಯೆ ಎಸಗಿದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕುರಿತು ಕೇಳಿದರು.


ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು