Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:2 - ಕನ್ನಡ ಸತ್ಯವೇದವು C.L. Bible (BSI)

2 ನನಗೆ ಕಿವಿಗೊಡು ಪ್ರಭು, ನನ್ನನು ಬಿಡಿಸು ಬೇಗನೆ I ನನ್ನಾಶ್ರಯಗಿರಿ, ದುರ್ಗಸ್ಥಾನವಾಗಿರು ನೀನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು; ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕಿವಿಗೊಟ್ಟು ಕೇಳಿ ಬೇಗ ನನ್ನನ್ನು ಬಿಡಿಸು; ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ ದುರ್ಗಸ್ಥಾನವೂ ಆಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನಗೆ ಕಿವಿಗೊಡು. ಬೇಗನೆ ಬಂದು, ನನ್ನನ್ನು ರಕ್ಷಿಸು. ನನಗೆ ಬಂಡೆಯೂ ನನ್ನ ಆಶ್ರಯಸ್ಥಾನವೂ ಕೋಟೆಯೂ ಆಗಿದ್ದು ನನ್ನನ್ನು ಕಾಪಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ; ಬೇಗ ಬಂದು ನನ್ನನ್ನು ಬಿಡಿಸಿರಿ; ನನ್ನನ್ನು ರಕ್ಷಿಸುವುದಕ್ಕೆ ನನ್ನ ಆಶ್ರಯದ ಬಂಡೆಯೂ, ಬಲವಾದ ಕೋಟೆಯೂ ಆಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:2
24 ತಿಳಿವುಗಳ ಹೋಲಿಕೆ  

ಕಷ್ಟಕಾಲದೊಳು ವಿಮುಖನಾಗಬೇಡ ನೀನೆನಗೆ I ಕಿವಿಗೊಡು, ಮೊರೆಯಿಡುವಾಗಲೆ, ಸದುತ್ತರಿಸು ಬೇಗನೆ II


ಹೇ ಪ್ರಭು, ನೀಡೆನಗೆ ಸದುತ್ತರವನು I ಕಿವಿಗೊಡು, ದೀನನು, ದಲಿತನು ನಾನು II


ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ತ ವಿಜ್ಞಾಪನೆಗೆ II


‘ನಮ್ಮಾಶ್ರಯ ದುರ್ಗ ಅವರ ಆಶ್ರಯದುರ್ಗದಂತಲ್ಲ’ ಎಂದು ಅವರ ಶತ್ರುಗಳೇ ಒಪ್ಪಿಕೊಳ್ಳುತ್ತಾರಲ್ಲವೆ?


ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ನನ್ನ ಮಾಂಸವನ್ನು ತಿಂದು, ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ನೆಲೆಸಿರುತ್ತಾನೆ. ನಾನು ಅವನಲ್ಲಿ ನೆಲೆಸಿರುತ್ತೇನೆ.


ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ಜ್ಞಾನಿಗಳ ನುಡಿಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ಮನಸ್ಸಿನಲ್ಲಿಡು.


ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II


ನನಗೋ ಪ್ರಭುವೇ ಕಲ್ಲು ಕೋಟೆ I ನನಗಾಶ್ರಯ ನೀಡುವ ಪೊರೆಬಂಡೆ II


ಪ್ರಭುವನೆ ನಿನ್ನಾಶ್ರಯವಾಗಿಸಿಕೊಂಡಿರುವುದರಿಂದ I ಪರಾತ್ಪರನನೆ ನಿನ್ನ ನಿವಾಸ ಆಗಿಸಿಕೊಂಡದ್ದರಿಂದ II


ಪ್ರಭೂ, ತಲತಲಾಂತರಕ್ಕೆ I ಶ್ರೀನಿವಾಸ ನೀನೆಮಗೆ II


ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II


ನಿನ್ನ ದಾಸನಿಗೆ ವಿಮುಖನಾಗಬೇಡಯ್ಯಾ I ಆಪತ್ತಿನಲ್ಲಿರುವೆ, ತಡಮಾಡಬೇಡಯ್ಯಾ II


ಉದ್ಧಾರಕೆ, ಗೌರವಕೆ ಎನಗಾಧಾರ ದೇವನೆ I ಭದ್ರವಾದ ಬಂಡೆ, ನನಗಾಶ್ರಯ ಆತನೆ II


ಬಡವನು, ದುರ್ಬಲನು ಆದೆನಗೆ ಪ್ರಭೂ, ನೀ ಹಿತಚಿಂತಕನು I ತಡಮಾಡಬೇಡ ದೇವಾ, ನೀನೆನಗುದ್ಧಾರಕನು, ಸಹಾಯಕನು II


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ಆತನೇ ನನಗೆ ದೇವರು, ನನ್ನಾಶ್ರಯಗಿರಿ, ನನ್ನ ರಕ್ಷಣಾಶೃಂಗ, ನನ್ನ ದುರ್ಗ, ನನ್ನ ಗುರಾಣಿ.


ಇಲ್ಲದಿರೆ ಶತ್ರು ತಿಳಿದಾನು ನನಗೆ ರಕ್ಷಕನಿಲ್ಲವೆಂದು I ಝಲ್ಲನೆ ಸೀಳಿಬಿಟ್ಟಾನು ಸಿಂಹದಂತೆ ಮೇಲೆಬಿದ್ದು II


ಶತ್ರುಗಾಗದಿರಲಿ ಸಡಗರ I ನನಗೊದಗದಿರಲಿ ಮುಜುಗರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು