Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:20 - ಕನ್ನಡ ಸತ್ಯವೇದವು C.L. Bible (BSI)

20 ಪಾರುಮಾಡುವುದವರನು ನಿನ್ನ ಸಾನ್ನಿಧ್ಯ ಸೆರಗು, ಜನರೊಳಸಂಚಿನಿಂದ I ದೂರವಿಡುವುದವರನು ನಿನ್ನಾಸರೆಯು, ವ್ಯಾಜ್ಯಮಾಡುವ ಜಿಹ್ವೆಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗೋಪ್ಯಸ್ಥಳದಲ್ಲಿ ಅಡಗಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ. ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ; ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ನೀವು ಅವರನ್ನು ನಿಮ್ಮ ಸಾನಿಧ್ಯದಲ್ಲಿಯೇ ಮರೆಮಾಡುತ್ತೀರಿ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ನಿಮ್ಮ ನಿವಾಸದಲ್ಲಿ ಅಡಗಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:20
27 ತಿಳಿವುಗಳ ಹೋಲಿಕೆ  

ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ I ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ II


ನೀನೆ ನನಗೆ ಮರೆಯು, ಆಪತ್ತಿನಲಾಸರೆಯು I ನನ್ನನು ಆವರಿಸುವ ಉದ್ಧಾರಕ ನಾದವು II


ನಾಲಿಗೆಯೆಂಬ ಚಾಟಿಹೊಡೆತಕ್ಕೆ ಮರೆಯಾಗಿರುವೆ ಪರಿವಿನಾಶ ಬಂದರೂ ನೀನು ಹೆದರದಿರುವೆ.


ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II


ಅವರ ನಾಲಗೆಯು ಸರ್ಪದಂತೆ I ಹಾವಿನ ವಿಷ ಅವರ ತುಟಿ ಹಿಂದೆ II


ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು I ಗರ್ವಿಗಳನು, ಸುಳ್ಳುದೇವರನು, ಹಿಂಬಾಲಿಸನವನು II


ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು I ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಲಿನೊಳವರು II


ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ ಎಡೆಕೊಡುತ್ತವೆ.


ಗರ್ವಿಗಳ ಕಾಲಿಗೆ ನಾ ಬೀಳುವುದು ಬೇಡ I ದುರುಳರ ಕೈ ನನ್ನ ಹೊರದೂಡುವುದು ಬೇಡ II


ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.


ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.


ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು.


ಗರ್ವಿಗಳೆದ್ದಿಹರು ದೇವಾ, ನನ್ನ ವಿರುದ್ಧವಾಗಿ I ನನ್ನ ಪ್ರಾಣಕೆ ಕಾದಿಹರು ಕ್ರೂರಿಗಳು ಗುಂಪಾಗಿ I ಕಾಣುತ್ತಿಹರವರು ನಿನ್ನನು ಪ್ರಭು, ಅಲಕ್ಷ್ಯವಾಗಿ II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II


ಅವರ ತೃಪ್ತಿ ನಿನ್ನ ಮಂದಿರದ ಸಮೃದ್ಧಿಯಿಂದ I ಅವರ ಪಾನೀಯ ನಿನ್ನ ಸಂಭ್ರಮ ಪ್ರವಾಹದಿಂದ II


ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II


ಪ್ರಭು ದಯಾಳು, ಕೃಪಾಪೂರ್ಣನು I ಸಹನಶೀಲನು, ಪ್ರೀತಿಮಯನು II


ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II


ಕೃಪೆಯಿಂದ ನಡೆಸು ನಿನ್ನ ದಾಸನನು I ಕಲಿಸೆನಗೆ ನಿನ್ನ ನಿಬಂಧನೆಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು