Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:21 - ಕನ್ನಡ ಸತ್ಯವೇದವು C.L. Bible (BSI)

21 ಮುತ್ತಿಗೆಗೆ ತುತ್ತಾದ ನಗರದೊಳಿಂದೆನ್ನ I ಅಚ್ಚರಿಯಿಂದ ರಕ್ಷಿಸಿದೊಡೆಯನಿಗೆ ನಮನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮುತ್ತಿಗೆ ಹಾಕಲ್ಪಟ್ಟಿರುವ ನಗರದಲ್ಲಿದ್ದ ನನಗೆ, ತನ್ನ ಕೃಪೆಯನ್ನು ಆಶ್ಚರ್ಯಕರವಾಗಿ ತೋರಿಸಿದ ಯೆಹೋವನಿಗೆ ಸ್ತೋತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮುತ್ತಿಗೆ ಹಾಕಲ್ಪಟ್ಟಿರುವ ನಗರದಲ್ಲಿದ್ದ ನನಗೆ ತನ್ನ ಕೃಪೆಯನ್ನು ಆಶ್ಚರ್ಯಕರವಾಗಿ ತೋರಿಸಿದ ಯೆಹೋವನಿಗೆ ಸ್ತೋತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನಿಗೆ ಸ್ತೋತ್ರವಾಗಲಿ! ವೈರಿಗಳು ಈ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಆತನು ತನ್ನ ಶಾಶ್ವತ ಪ್ರೀತಿಯನ್ನು ಆಶ್ಚರ್ಯಕರವಾಗಿ ತೋರಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರಿಗೆ ಸ್ತುತಿಯುಂಟಾಗಲಿ; ಮುತ್ತಿಗೆ ಹಾಕಲಾದ ನಗರದಲ್ಲಿದ್ದ ನನಗೆ ದೇವರು ಆಶ್ಚರ್ಯಕರವಾದ ಒಡಂಬಡಿಕೆಯ ಪ್ರೀತಿಯನ್ನು ತೋರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:21
8 ತಿಳಿವುಗಳ ಹೋಲಿಕೆ  

ಶರಣರನು ಶತ್ರುವಿಂದ ಸಂರಕ್ಷಿಸುವಾತ ನೀನಯ್ಯಾ I ಭುಜಬಲವನು ಪ್ರಯೋಗಿಸಿ ಕಾಪಾಡುವಾತ ನೀನಯ್ಯಾ I ನಿನ್ನಚಲ ಪ್ರೀತಿಯನ್ನಚ್ಚರಿಯಿಂದ ತೋರ್ಪಡಿಸಯ್ಯಾ II


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನಾನು ಹೇಳುವುದನ್ನು ಗಮನದಿಂದ ಕೇಳು - ಈ ದಿನ ನಿನ್ನನ್ನು ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಜನಸಾಮಾನ್ಯರು, ಹೀಗೆ ನಾಡಿನವರೆಲ್ಲರನ್ನು ಎದುರಿಸತಕ್ಕವನನ್ನಾಗಿ ಮಾಡಿದ್ದೇನೆ; ಕೋಟೆಕೊತ್ತಲಗಳಿಂದ ಸುಸಜ್ಜಿತ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ನಿನ್ನನ್ನು ಸ್ಥಾಪಿಸಿದ್ದೇನೆ.


ಪ್ರಭುವಿನಿಂದಲೆ ಆದ ಈ ಕಾರ್ಯ I ನಮ್ಮ ಕಣ್ಣಿಗೆ ಅದೆಂತಹ ಆಶ್ಚರ್ಯ! II


ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II


ನಾಲಿಗೆಯೆಂಬ ಚಾಟಿಹೊಡೆತಕ್ಕೆ ಮರೆಯಾಗಿರುವೆ ಪರಿವಿನಾಶ ಬಂದರೂ ನೀನು ಹೆದರದಿರುವೆ.


ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ I ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು