Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:22 - ಕನ್ನಡ ಸತ್ಯವೇದವು C.L. Bible (BSI)

22 ದೇವರಿಂದ ದೂರನಾದೆಯೆಂಬ ದಿಗಿಲೇರಲು I ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನಂತೂ ಭಯಭ್ರಾಂತನಾಗಿ - ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನೆಂದು ಹೇಳಿಕೊಂಡಿದ್ದೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು ನನ್ನ ಗಾಬರಿಯಲ್ಲಿ ಹೇಳಿದೆನು; ಆದರೂ ನಾನು ಸಹಾಯಕ್ಕಾಗಿ ನಿಮಗೆ ಮೊರೆಯಿಡಲು ನೀವು ಕರುಣೆಗಾಗಿ ಕೂಗಿದ್ದನ್ನು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:22
20 ತಿಳಿವುಗಳ ಹೋಲಿಕೆ  

ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.


ನನ್ನನು ಆವರಿಸಿಕೊಂಡಿದೆ ನಿನ್ನ ಕಡುಕೋಪಾಗ್ನಿಯು I ನನ್ನ ಹಾಳುಮಾಡುತ್ತಿದೆ ನಿನ್ನ ಭಯಂಕರ ದಾಳಿಯು II


ಆಲಿಸಿಹನು ಪ್ರಭು ಎನ್ನ ಪ್ರಾರ್ಥನೆಯನು I ಅಂಗೀಕರಿಸಿಹನು ಎನ್ನಯ ವಿಜ್ಞಾಪನೆಯನು II


ಇಂತಿರಲು ನೀನು, ‘ಆತ ಕಾಣನು, ನನ್ನ ವ್ಯಾಜ್ಯ ಆತನ ಮುಂದಿದೆ ಆತನಿಗಾಗಿ ಕಾದಿರುವೆ’ ಎಂದುಕೊಂಡರೂ ಆತ ಕೇಳಿಯಾನೆ?


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ನಿನ್ನ ಸನ್ನಿಧಿಯಿಂದ ನಾನಿನ್ನು ಬಹಿಷ್ಕೃತ ಕಾಣೆನೆಂದೂ ನಿನ್ನ ಪವಿತ್ರಾಲಯ ನಿರುತ. ಈ ಭಾಗ್ಯಗಳೆಲ್ಲ ಎನಗಿಲ್ಲವೆಂದು ಪರಿಪರಿಯಾಗಿ ಮರುಗುತಿರುವೆನಿಂದು.


ಜೆರುಸಲೇಮಿನ ಜನರಾದರೋ ಇಂತೆಂದರು : ಸರ್ವೇಶ್ವರ ನಮ್ಮನ್ನು ಕೈಬಿಟ್ಟಿಹನು, ಆ ಸ್ವಾಮಿ ನಮ್ಮನ್ನು ಮರೆತುಬಿಟ್ಟಿಹನು.”


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.


ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುತ್ತಿದ್ದರು. ಅಷ್ಟರಲ್ಲಿ ಸೌಲನೂ ಅವನ ಜನರೂ ಬಂದು ಅವರನ್ನು ಸುತ್ತಿ ಹಿಡಿಯುವುದಕ್ಕಿದ್ದರು.


ನಿನಗೆ ಮೊರೆಯಿಡುವೆ, ನನಗಾಗದಿರಲಿ ಹೇ ಪ್ರಭು, ಮಾನಭಂಗ I ದುರುಳರಿಗಾಗಲೀ ಆಶಾಭಂಗ, ಮೂಕರಾಗವರು ಸೇರಲಿ ನರಕ II


ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!


ಶರಣರನು ಶತ್ರುವಿಂದ ಸಂರಕ್ಷಿಸುವಾತ ನೀನಯ್ಯಾ I ಭುಜಬಲವನು ಪ್ರಯೋಗಿಸಿ ಕಾಪಾಡುವಾತ ನೀನಯ್ಯಾ I ನಿನ್ನಚಲ ಪ್ರೀತಿಯನ್ನಚ್ಚರಿಯಿಂದ ತೋರ್ಪಡಿಸಯ್ಯಾ II


ಎನ್ನ ಪ್ರಾರ್ಥನೆಯನು ತಿರಸ್ಕರಿಸದ ದೇವನಿಗೆ ಸ್ತುತಿ I ತನ್ನ ಪ್ರೀತಿಯನೆನಗೆ ನಿರಾಕರಿಸದಾತನಿಗೆ ಸನ್ನುತಿ II


ಏಕೆಂದರೆ, ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು; ಹುಡುಕುವವನಿಗೆ ಸಿಗುವುದು; ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು