Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:3 - ಕನ್ನಡ ಸತ್ಯವೇದವು C.L. Bible (BSI)

3 ಕೈ ಹಿಡಿದು ನಡೆಸೆನ್ನನು ನಿನ್ನ ನಾಮ ನಿಮಿತ್ತ I ನೀನೆನಗೆ ಪೊರೆಬಂಡೆ, ಸ್ಥಿರ ಕೋಟೆಕೊತ್ತಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ; ಆದುದರಿಂದ ನಿನ್ನ ಹೆಸರಿನ ನಿಮಿತ್ತ ದಾರಿತೋರಿಸಿ ನನ್ನನ್ನು ನಡೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನೇ ನನ್ನ ಬಂಡೆಯೂ ಕೋಟೆಯೂ ಆಗಿದ್ದೀಯಲ್ಲಾ; ಆದದರಿಂದ ನಿನ್ನ ಹೆಸರಿನ ನಿವಿುತ್ತ ದಾರಿತೋರಿಸಿ ನನ್ನನ್ನು ನಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನೇ ನನ್ನ ಬಂಡೆಯೂ ಕೋಟೆಯೂ ಆಗಿರುವುದರಿಂದ ನಿನ್ನ ಹೆಸರಿನ ಘನತೆಗಾಗಿ ನನ್ನನ್ನು ನಡೆಸು; ನನಗೆ ಮಾರ್ಗದರ್ಶನ ನೀಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ; ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ನಡೆಸಿರಿ; ನನಗೆ ಮಾರ್ಗದರ್ಶಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:3
21 ತಿಳಿವುಗಳ ಹೋಲಿಕೆ  

ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು I ನಮ್ಮ ಕಾಲುಗಳನ್ನೂರಿಸಿ ನಡೆಯಲು ಶಾಂತಿಪಥದೊಳು II


ದೇವಾ, ಮುಕ್ತಿದಾತ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ I ಪಾಪಗಳನು ಅಳಿಸಿ ನಮ್ಮನುದ್ಧರಿಸು ನಿನ್ನ ನಾಮದ ಪ್ರಯುಕ್ತ II


ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು.


ಸರ್ವೇಶ್ವರಾ, ನಮ್ಮ ದ್ರೋಹಗಳು ಹಲವು ನಿಮಗೆ ವಿರುದ್ಧ ಪಾಪಮಾಡಿದೆವು. ನಮ್ಮ ಅಪರಾಧಗಳೇ ನಮಗೆ ವಿರುದ್ಧ ಸಾಕ್ಷಿ ನೀಡುತ್ತಿವೆ ಆದರೂ ನಿಮ್ಮ ನಾಮದ ನಿಮಿತ್ತ ಕೈನೀಡು ನಮಗೆ.


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ಕೇಡಿದೆಯೇ ನೋಡು ನನ್ನ ಮಾರ್ಗದಲಿ I ನಡೆಸೆನ್ನನು ಆ ಸನಾತನ ಪಥದಲಿ II


ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕ್ಕೆ I ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ II


ನಿನ್ನ ನಾಮದ ನಿಮಿತ್ತ ನನ್ನನು ಈಕ್ಷಿಸು I ಎನ್ನ ಘೋರ ಪಾಪವನು ಪ್ರಭು ಕ್ಷಮಿಸು II


ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ I ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ II


ಹಗಲಲಿ ಅವರ ಮುಂದೆ ಸಾಗಿದಿರಿ ಮೇಘಸ್ತಂಭದಂತೆ ಇರುಳಲಿ ದಾರಿತೋರಿದಿರಿ ಬೆಳಕನೀವ ಅಗ್ನಿಸ್ತಂಭದಂತೆ.


ದೀನರನು ನಡೆಸುವನು ತನ್ನ ವಿಧಿಗನುಸಾರ I ದಲಿತರಿಗೆ ಕಲಿಸುವನು ತನ್ನ ಧರ್ಮಾಚಾರ II


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಹೀಗಿದ್ದರು ನೀವಾದಿರಿ ಅವರಿಗೆ ಕರುಣಾನಿಧಿ ತೊರೆದುಬಿಡಲಿಲ್ಲ ನೀವವರನು ಮರುಭೂಮಿಯಲಿ. ಬಿಟ್ಟುಹೋಗಲಿಲ್ಲ ದಾರಿತೋರಿದಾ ಮೇಘಸ್ತಂಭ ಹಗಲಲಿ ಮುನ್ನಡೆಯಿತು ಬೆಳಕನೀಯುತಾ ಅಗ್ನಿಸ್ತಂಭ ಇರುಳಲಿ.


ಕಾನಾನ್ಯರು ಮತ್ತು ನಾಡಿನ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರೇ ಉಳಿಯದಂತೆ ಮಾಡುವರು. ಆಗ ನಿಮ್ಮ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿರಿ?” ಎಂದನು.


ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.


ನೀನಾಗಿರು ನನಗಾಶ್ರಯದುರ್ಗ, ಕೋಟೆಕೊತ್ತಲು I ನೀನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು II


ಮಾಯವಾಗುತ್ತಿದೆ ನನ್ನೀ ಜೀವಮಾನ ಹೊಗೆಯಂತೆ I ಉರಿಯುತ್ತಿವೆ ಎನ್ನೆಲುಬುಗಳು ಒಲೆಯಲ್ಲಿಟ್ಟ ಕೊರಡಿನಂತೆ II


ಆತನೆನ್ನ ಮೊರೆಗೆ ಕಿವಿಗೊಟ್ಟ ನಿಮಿತ್ತ I ವಿಜ್ಞಾಪಿಸುವೆ ಜೀವಮಾನ ಪರಿಯಂತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು