Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:7 - ಕನ್ನಡ ಸತ್ಯವೇದವು C.L. Bible (BSI)

7 ಹರ್ಷಾನಂದಗೊಳ್ಳುವೆ ನೆನೆದು ನಿನ್ನ ಅನಂತ ಪ್ರೀತಿಯನು I ಈಕ್ಷಿಸಿದೆ ನೀ ಭಕ್ತನ ದೀನತೆಯನು, ಲಕ್ಷಿಸಿದೆ ಬಾಧೆಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವುದನ್ನು ನೋಡಿ, ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವದನ್ನು ನೋಡಿ ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರೇ, ನಿನ್ನ ಕರುಣೆಯು ನನ್ನನ್ನು ಉಲ್ಲಾಸಗೊಳಿಸುವುದು. ನನ್ನ ಸಂಕಟವನ್ನು ನೀನು ನೋಡಿರುವೆ; ನನಗಿರುವ ಆಪತ್ತುಗಳು ನಿನಗೆ ತಿಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಉಲ್ಲಾಸಿಸಿ ಸಂತೋಷ ಪಡುವೆನು; ಏಕೆಂದರೆ ನೀವು ನನ್ನ ಕಷ್ಟಗಳನ್ನು ಲಕ್ಷ್ಯಕ್ಕೆ ತಂದು, ನನ್ನ ಪ್ರಾಣದ ಸಂಕಟಗಳನ್ನು ಅರಿತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:7
23 ತಿಳಿವುಗಳ ಹೋಲಿಕೆ  

ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ನನ್ನ ಕಷ್ಟವ ನೋಡಿ ಮುಕ್ತಗೊಳಿಸೆನ್ನನು I ಮರೆತಿಲ್ಲ ನಾನು ನಿನ್ನ ಧರ್ಮಶಾಸ್ತ್ರವನು II


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?


ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ.


ಹರಿಯುತ್ತಿರುವುದು ನಿರಂತರವಾಗಿ ನನ್ನ ಕಣ್ಣೀರು.


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಉರುಲೊಡ್ಡಿಹರು ನಾ ನಡೆಯುವ ಮಾರ್ಗದಲೆ I ನಾ ಮನಗುಂದಿರೆ, ಪರಿಹಾರವನು ನೀ ಬಲ್ಲೆ II


ದೇವಾ, ಈಡು ಮಾಡಿದೆಯೆನ್ನನು ಕಷ್ಟಸಂಕಟಗಳಿಗೆ I ಪುನಶ್ಚೇತನಗೊಳಿಸೀಗ, ಭೂತಳದಿಂದೆತ್ತು ಮೇಲಕೆ II


ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II


ಮೃತ್ಯುವಿನ ಬಾಯಿಂದೆನ್ನ ಬದುಕಿಸುವ ಪ್ರಭು, ಕನಿಕರಿಸು I ವೈರಿ-ವಿರೋಧಿಗಳೆನಗೆ ಗೈದ ಕಿರುಕುಳವನು, ನೀ ಗಮನಿಸು II


ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ I ಹರ್ಷಿಸಿ ಆನಂದಿಸುವೆವು ಆಗ ದಿನವಾದ್ಯಂತ II


ನೋಡೆನ್ನ ಬಾಧೆ ಬವಣೆಗಳನು I ತೊಡೆದು ಹಾಕೆನ್ನ ಪಾಪಗಳನು II


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ಜೇಡಿಮಣ್ಣಿನಿಂದ ನನ್ನನ್ನು ಮಾಡಿದೆಯೆಂದು ನೆನೆಸಿಕೊ ಆದರೆ ಈಗ ಮರಳಿ ಮಣ್ಣಾಗುವಂತೆ ಮಾಡುವಿಯೋ?


ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ.


ಹೇ, ಸರ್ವೇಶ್ವರಾ, ನಮಗೊದಗಿರುವ ದುರ್ಗತಿಯನ್ನು ನೆನೆಸಿಕೊ ನಾವು ಸಹಿಸುತ್ತಿರುವ ನಿಂದೆ ಅವಮಾನಗಳನ್ನು ಗಮನಕ್ಕೆ ತಂದುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು