Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:8 - ಕನ್ನಡ ಸತ್ಯವೇದವು C.L. Bible (BSI)

8 ವಿರೋಧಿಗಳ ವಶಕ್ಕೆ ಎನ್ನನು ನೀ ಬಿಟ್ಟುಬಿಡಲಿಲ್ಲ I ನಿರಾತಂಕದೆಡೆಯಲಿ ನನ್ನ ನಿಲ್ಲಿಸಿದೆಯಲ್ಲಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; ನಿರಾತಂಕ ಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; ನಿರಾತಂಕಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ವೈರಿಗಳು ನನ್ನನ್ನು ಸೆರೆಹಿಡಿದೊಯ್ಯಲು ನೀನು ಬಿಟ್ಟುಕೊಡುವುದಿಲ್ಲ; ನನ್ನನ್ನು ಅವರ ಬಲೆಗಳಿಂದ ಬಿಡುಗಡೆ ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿ ಬಿಡಲಿಲ್ಲ; ನನ್ನ ಪಾದಗಳನ್ನು ವಿಶಾಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:8
13 ತಿಳಿವುಗಳ ಹೋಲಿಕೆ  

ಅಂತೆಯೆ, ಕಷ್ಟದಿಂದ ನಿನ್ನನ್ನು ತಪ್ಪಿಸಬೇಕೆಂಬುದು ಇಕ್ಕಟ್ಟಿಲ್ಲದ ಬಯಲಿಗೆ ನಿನ್ನನ್ನು ತರಬೇಕೆಂಬುದು ನಿನ್ನ ಊಟದ ಮೇಜು ಸಮೃದ್ಧಿಯಾಗಿರಬೇಕೆಂಬುದು ದೇವರ ಉದ್ದೇಶವಾಗಿರುವುದು.


ಬಿಕ್ಕಟ್ಟಿನಿಂದ ಬಿಡಿಸಿ ತಂದನು ಬಯಲಿಗೆ I ಅಕ್ಕರೆಯಿಂದ ಮೆಚ್ಚಿ ರಕ್ಷಕನಾದ ನನಗೆ II


ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II


ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ?


“ಇದಲ್ಲದೆ ಈಜಿಪ್ಟಿನವರನ್ನು ಕ್ರೂರ ಅರಸನ ವಶಕ್ಕೆ ಒಪ್ಪಿಸುವೆನು. ರಾಜನು ದಬ್ಬಾಳಿಕೆಯಿಂದ ಅವರನ್ನು ಆಳುವನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.”


ಸರ್ವೇಶ್ವರ ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ದಿನ ಖಚಿತವಾಯಿತು.


ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು.


ಆಪ್ತರೂ ಹೇಸಿ ದೂರಸರಿವಂತೆ ಮಾಡಿರುವೆ I ಬಂಧಿತನಾದ ನಾನು ಬಿಡಿಸಿಕೊಳ್ಳಲಾಗದಿರುವೆ II


ದೇವರು ನನ್ನನ್ನೊಪ್ಪಿಸಿಬಿಟ್ಟಿದ್ದಾನೆ ತುಂಟರಿಗೆ ನನ್ನನ್ನು ಎಸೆದುಬಿಟ್ಟಿದ್ದಾನೆ ದುಷ್ಟರ ಕೈಗೆ.


ಅಬೀಷೈಯು ದಾವೀದನಿಗೆ, “ದೇವರು ಈ ದಿನ ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾರೆ; ಅಪ್ಪಣೆಯಾಗಲಿ, ನಾನು ಭರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಕಚ್ಚಿಕೊಳ್ಳುವಂತೆ ತಿವಿಯುತ್ತೇನೆ. ಎರಡನೆಯ ಸಾರಿ ಹೊಡೆಯುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿದನು.


ಇಸ್ರಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.


ಆಗ ನಾವು ನಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಮೊರೆಯಿಟ್ಟೆವು; ಅವರು ಆಲಿಸಿ ನಮ್ಮ ದುರವಸ್ಥೆಯನ್ನೂ ಕಷ್ಟ ಉಪದ್ರವಗಳನ್ನೂ ನೋಡಿ,


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು