Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:9 - ಕನ್ನಡ ಸತ್ಯವೇದವು C.L. Bible (BSI)

9 ಸಂಕಟದಲಿ ನಾ ಸಿಲುಕಿಕೊಂಡಿರುವೆ I ಕಣ್ಣುಗುಡ್ಡೆಗಳಿದೋ ಸೇದಿಹೋಗಿವೆ I ದೇಹಾತ್ಮಗಳೆರಡು ಕುಗ್ಗಿಹೋಗಿವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣುಗುಡ್ಡು ಸೇದಿಕೊಂಡಿದೆ; ದೇಹಾತ್ಮಗಳು ಕುಗ್ಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನೇ, ನನಗೆ ಅನೇಕ ಇಕ್ಕಟ್ಟುಗಳಿವೆ; ನನ್ನನ್ನು ಕರುಣಿಸು. ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ, ನನ್ನ ಗಂಟಲು ನೋಯುತ್ತಿದೆ, ಹೊಟ್ಟೆಯೂ ನೋಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಇಕ್ಕಟ್ಟಿನಲ್ಲಿದ್ದೇನೆ; ನನ್ನ ಕಣ್ಣೂ ನನ್ನ ಪ್ರಾಣವೂ ನನ್ನ ದೇಹವೂ ದುಃಖದಿಂದ ಕ್ಷೀಣವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:9
19 ತಿಳಿವುಗಳ ಹೋಲಿಕೆ  

ಮಂಕಾದವು ಕಣ್ಣುಗಳು ರೋದನದಿಂದ I ಮಬ್ಬಾದವವು ವೈರಿಗಳ ಬಾಧೆಯಿಂದ II


ಮಬ್ಬಾಗಿ ಹೋಗಿವೆ ಕಣ್ಗಳು ಬಾಧೆಯಿಂದ I ಪ್ರಭೂ, ಕೈಯೊಡ್ಡಿ ಮೊರೆಯಿಡುತ್ತಿರುವೆ ಸದಾ II


ನನ್ನ ತನುಮನಗಳೆಲ್ಲವೂ ಸೊರಗಿಹೋದರೂ I ನನ್ನಾತ್ಮದ ಶಕ್ತಿ, ಶಾಶ್ವತ ಸೊತ್ತು ದೇವರು II


ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.


ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ.


ದೇವರಾಜ್ಞೆಯನು ವಿರೋಧಿಸಿದ ಕಾರಣ I ಪರಾತ್ಪರನಾಜ್ಞೆಯನು ಹೀಗಳೆದ ಕಾರಣ II


ಏಕೆನೆ, ದಿನವಿಡಿ ನಾ ಬಾಧೆಪಡುತ್ತಿರುವೆ I ದಿನದಿನವು ದಂಡನೆಗೆ ಗುರಿಯಾಗುತ್ತಿರುವೆ II


ಪೂರೈಸುವೆನು ಬಾಯಾರೆ ಮಾಡಿದ ಹರಕೆಯನು I ಸಂಕಟಕಾಲದಲಿ ನಾ ಮಾಡಿದ ವ್ರತವನು II


ಮಣ್ಣುಪಾಲಾಗಿದೆ ನಮ್ಮ ಪ್ರಾಣ I ನೆಲ ಕಚ್ಚಿಕೊಂಡಿದೆ ನಮ್ಮ ದೇಹ II


ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ ಅಂಗಗಳೆಲ್ಲ ನೆರಳಂತೆ ನಿಸ್ಸಾರವಾಗಿವೆ.


ಬಿಕ್ಕಟ್ಟಿನಿಂದ ಬಿಡಿಸಿ ತಂದನು ಬಯಲಿಗೆ ಅಕ್ಕರೆಯಿಂದ ಮೆಚ್ಚಿ ನನಗಾದನು ರಕ್ಷೆ.


ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ I ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕಹಾಗೆ II


ಹಿಡಿದುಕೊಳ್ವೆನು ಶತ್ರುಗಳನು ಬೆನ್ನಟ್ಟಿ I ಅವರನು ನಿರ್ಮೂಲ ಮಾಡದೆ ಬರೆನು ಹಿಂತಿರುಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು