Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:1 - ಕನ್ನಡ ಸತ್ಯವೇದವು C.L. Bible (BSI)

1 ಯಾರ ಪಾಪ ಪರಿಹಾರವಾಗಿದೆಯೋ I ಯಾರ ದ್ರೋಹ ವಿಮೋಚನೆಯಾಗಿದೆಯೋ - ಅವರೇ ಧನ್ಯರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾವನ ದ್ರೋಹವು ಪರಿಹಾರವಾಗಿದೆಯೋ ಯಾವನ ಪಾಪವು ಕ್ಷವಿುಸಲ್ಪಟ್ಟಿದೆಯೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯಾವನ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಯಾವನ ದ್ರೋಹಗಳು ಅಳಿಸಲ್ಪಟ್ಟಿವೆಯೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:1
27 ತಿಳಿವುಗಳ ಹೋಲಿಕೆ  

ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ಮನ್ನಿಸಿದೆ ನಿನ್ನ ಪ್ರಜೆಯ ದ್ರೋಹವನು I ಕ್ಷಮಿಸಿದೆ ನೀ ಅವರ ಪಾಪಗಳೆಲ್ಲವನು II


ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು I ಗರ್ವಿಗಳನು, ಸುಳ್ಳುದೇವರನು, ಹಿಂಬಾಲಿಸನವನು II


ನ್ಯಾಯದಂತೆ ನಡೆಯುವವರು ಧನ್ಯರು I ಅವಿರತವಾಗಿ ನೀತಿವಂತರು ಧನ್ಯರು II


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ಮನದಲಿ “ದೇವನಿಲ್ಲ” ಎನ್ನುವವರು ದುರ್ಮತಿಗಳು I ಹೇಯಕೃತ್ಯವೆಸಗುವವರು ಆ ಭ್ರಷ್ಟಾಚಾರಿಗಳು I ಒಳಿತನ್ನು ಮಾಡುವವರಾರೂ ಇಲ್ಲ ಅವರೊಳು II


ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ I ದಣಿದೆನ್ನ ಮನ ದೇವಾ, ಹಂಬಲಿಸುತಿದೆ ನಿನಗಾಗಿ II


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.


ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II


ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II


ಪ್ರಭುವೇ, ಸ್ವರ್ಗಸೇನಾಧೀಶ್ವರನೇ I ನಿನ್ನಲಿ ನಂಬಿಕೆ ಇಡುವವನೇ ಧನ್ಯನು I


ನೀಚಕಾರ್ಯವೆಸಗಿ ಹಿಗ್ಗುವ ಘನ ಮಾನವನೆ I ದೇವರ ಅನಂತ ಕೃಪೆಯನು ಪ್ರತಿಭಟಿಸುವವನೆ I ದೇವರ ದೃಷ್ಟಿಯಲಿ ನೀನು ಹೀನಾಯನೆ II


ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II


ಹೇ ದೇವಾ, ಕಿವಿಗೊಡು ನನ್ನ ಪ್ರಾರ್ಥನೆಗೆ I ವಿಮುಖನಾಗಬೇಡ ನನ್ನ ವಿಜ್ಞಾಪನೆಗೆ II


ಅವರ ಅಪರಾಧವನ್ನು ಕ್ಷಮಿಸಬೇಡಿ. ನಿಮ್ಮೆದುರಿಗಿರುವ ಅವರ ಪಾಪವನ್ನು ಅಳಿಸಿಬಿಡಬೇಡಿ. ಏಕೆಂದರೆ ಕಟ್ಟುವವರ ಮುಂದೆಯೇ ಅವರು ನಿಮ್ಮನ್ನು ಕೆಣಕಿದ್ದಾರೆ,” ಎಂದು ನಾನು ಪ್ರಾರ್ಥಿಸಿದೆ.


ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ಮನ್ನಿಸುವನಾತ ನನ್ನ ದೋಷಗಳನು I ವಾಸಿಮಾಡುವನು ನನ್ನ ರೋಗಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು