Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:10 - ಕನ್ನಡ ಸತ್ಯವೇದವು C.L. Bible (BSI)

10 ‘ದುಷ್ಟರ ಕಷ್ಟನಷ್ಟಗಳು ಅನೇಕ I ಪ್ರಭುವನು ನಂಬಿದವರ ಸುತ್ತ ಮರುಕ’ ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಆವರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಯೆಹೋವ ದೇವರಲ್ಲಿ ಭರವಸವಿಡುವವನನ್ನು ಅದರ ಒಂಡಬಡಿಕೆಯ ಪ್ರೀತಿಯು ಸುತ್ತುವರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:10
20 ತಿಳಿವುಗಳ ಹೋಲಿಕೆ  

ದೇವರ ವಾಕ್ಯ ಸ್ಮರಿಸುವವನು ಸುಕ್ಷೇಮದಿಂದ ಬಾಳುವನು; ಸರ್ವೇಶ್ವರನಲ್ಲಿ ಭರವಸೆ ಇಡುವವನು ಭಾಗ್ಯವಂತನು.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು; ಮಂಗಳವು ಸತ್ಪುರುಷರಿಗೆ ಸಿಗುವ ಪ್ರತಿಫಲವು.


ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II


ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ, ಅವನೇ ಧನ್ಯನು I ಪ್ರಭುವನು ತನ್ನ ದೇವರೆಂದು ಯಾರು ನಂಬಿಹನೋ, ಅವನೇ ಧನ್ಯನು II


ಸವಿದು ನೋಡು ಪ್ರಭುವಿನ ಮಾಧುರ್ಯವನು I ಆತನನು ಆಶ್ರಯಿಸಿಕೊಂಡವನು ಧನ್ಯನು II


ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.


ಪ್ರಭುವೇ, ಸ್ವರ್ಗಸೇನಾಧೀಶ್ವರನೇ I ನಿನ್ನಲಿ ನಂಬಿಕೆ ಇಡುವವನೇ ಧನ್ಯನು I


ಅನ್ಯದೇವರನ್ನು ಬಯಸುವವರನ್ನು ಕಾದಿದೆ ಕಠಿಣ ಕಷ್ಟ I ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ I ಆ ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ಪಾಪಾತ್ಮನು ನೂರು ಸಾರಿ ಕೆಟ್ಟದ್ದನ್ನು ಮಾಡಿ ದೀರ್ಘಕಾಲ ಬದುಕಿದರೂ ದೇವರಿಗೆ ಹೆದರಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


ಉಳಿಯದಿರಲಿ ನಾಡೊಳು ಚಾಡಿಕೋರರು I ಕೇಡಿಂದ ನಾಶವಾಗಲಿ ಹಿಂಸಕರು II


ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು I ಗರ್ವಿಗಳನು, ಸುಳ್ಳುದೇವರನು, ಹಿಂಬಾಲಿಸನವನು II


ದುರುಳರಿಗೆ ಇಲ್ಲ ಶಾಂತಿಸಮಾಧಾನ,” ಎನ್ನುತ್ತಾರೆ ದೇವರು.


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು