Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:4 - ಕನ್ನಡ ಸತ್ಯವೇದವು C.L. Bible (BSI)

4 ಪ್ರಭುವಿನ ಶಿಕ್ಷಾಹಸ್ತ ನನ್ನ ಮೇಲೆ ಭಾರವಾಗಿತ್ತು ಹಗಲಿರುಳು I ಬೇಸಿಗೆಯ ನೀರಿನಂತೆ ಬತ್ತಿಹೋಗಿತ್ತು ನನ್ನ ಶರೀರದ ತಿರುಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ನೀರಿನಂತೆ ನನ್ನ ಶರೀರದ ಸಾರವೆಲ್ಲಾ ಬತ್ತಿಹೋಯಿತು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು. ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರೇ, ರಾತ್ರಿ ಹಗಲು ನಿಮ್ಮ ಕೈ ನನ್ನ ಮೇಲೆ ಭಾರವಾಗಿತ್ತು; ನನ್ನ ಬಲವು ಬೇಸಿಗೆಯ ಬಿಸಿಲಿನಲ್ಲಿ ಕುಂದಿಹೋಗುವಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:4
15 ತಿಳಿವುಗಳ ಹೋಲಿಕೆ  

ದೇವರ ಹಸ್ತ ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿ,” ಎಂದು ಕೇಳಿಕೊಂಡರು.


ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II


ಆದ್ದರಿಂದ ನೀನು ನನಗೆ ಅಂಜಬೇಕಾಗಿಲ್ಲ ನನ್ನ ಕೈ ಬಲ ನಿನಗೆ ಹೊರೆಯಾಗಿರುವುದಿಲ್ಲ.


ಒಲೆಯಂತೆ ಸುಡುತ್ತಿದೆ ನಮ್ಮ ಚರ್ಮ ಕ್ಷಾಮಕಾಲದ ಭೀಕರ ಜ್ವರದ ನಿಮಿತ್ತ.


ಈಗ ಅವರ ಮುಖ ಕಾರ್ಮೋಡಕ್ಕಿಂತ ಕಪ್ಪು ಬೀದಿಗಳಲ್ಲಿ ನೋಡುತ್ತಿದ್ದವರಿಗೆ ಅವರ ಗುರುತೂ ಸಿಗದು. ಅವರ ಚರ್ಮ ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ; ಒಣಗಿ ಕಟ್ಟಿಗೆಯಾಗಿದೆ.


ನನ್ನ ಚರ್ಮ ಉದುರುತ್ತಿದೆ ಕರ್ರಗಾಗಿ ನನ್ನೆಲುಬು ಉರಿಯುತ್ತಿದೆ ತಾಪಕ್ಕೊಳಗಾಗಿ.


ಇದು ನನಗೆ ನ್ಯಾಯ ದೊರಕಿಸಲಿ, ದೇವರ ಮುಂದೆ ತನ್ನ ಮಿತ್ರನಿಗಾಗಿ ಒಬ್ಬನು ವಾದಿಸುವಂತೆ.


ಬಂಡಿ ಹೋಗುವ ದಾರಿಯನ್ನು ಗಮನಿಸಿರಿ. ಅದು ತಾನಾಗಿ ಸ್ವದೇಶದ ದಾರಿಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈಗ ಬಂದಿರುವ ಕೇಡನ್ನು ಕಳುಹಿಸಿದವನು ಆ ಸರ್ವೇಶ್ವರನೇ ಎಂದು ತಿಳಿಯಿರಿ. ಬಂಡಿ ಆ ಮಾರ್ಗವನ್ನು ಹಿಡಿಯದಿದ್ದರೆ ಆ ಸರ್ವೇಶ್ವರನ ಹಸ್ತ ನಮ್ಮನ್ನು ಮುಟ್ಟಲಿಲ್ಲ, ಈ ಕೇಡು ಆಕಸ್ಮಿಕವಾಗಿ ಬಂದಿದೆ ಎಂದು ತಿಳಿದುಕೊಳ್ಳಿ,” ಎಂದು ಹೇಳಿದರು.


ಮಂಜೂಷವು ಅಲ್ಲಿ ಹೋದ ಮೇಲೆ ಸರ್ವೇಶ್ವರನ ಹಸ್ತ ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲ ಎದ್ದಿತು. ಸರ್ವೇಶ್ವರ ಆ ಊರಿನ ಚಿಕ್ಕವರಲ್ಲೂ ದೊಡ್ಡವರಲ್ಲೂ ಗಡ್ಡೆಗಳನ್ನು ಬರಮಾಡಿದರು.


ಅವರು ಬೆಳೆದು ದೊಡ್ಡವರಾಗುವವರೆಗೂ ಮದುವೆಯಾಗದೆ ಇರುವಿರೋ? ಬೇಡ, ಮಕ್ಕಳೇ, ಸರ್ವೇಶ್ವರ ನನ್ನ ಕೈ ಬಿಟ್ಟಿದ್ದಾರೆ, ನಿಮಗಾಗಿ ನಾನು ಬಹಳ ವಿಷಾದಿಸುತ್ತೇನೆ,” ಎಂದು ಸಮಾಧಾನ ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು