Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 [ಹೀಗಿರುವಲ್ಲಿ] ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಅಪರಾಧಪಾಪಗಳನ್ನು ಪರಿಹರಿಸಿಬಿಟ್ಟಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ಪಾಪವನ್ನು ನಿಮಗೆ ತಿಳಿಸಿ, ನನ್ನ ಅನ್ಯಾಯವನ್ನು ಮರೆಮಾಡದೆ, “ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ ಅರಿಕೆ ಮಾಡುವೆನು,” ಎಂದು ಹೇಳಿದೆನು; ಆಗ, ನೀವು ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:5
37 ತಿಳಿವುಗಳ ಹೋಲಿಕೆ  

ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ನಾನಪರಾಧಿಯೆಂದು ನಿವೇದಿಸುವೆ I ಪಾಪಕ್ಕಾಗಿ ಪಶ್ಚಾತ್ತಾಪ ಪಡುವೆ II


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.


ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.


ಪಡುವಣದಿಂದ ಮೂಡಣವೆಷ್ಟೋ ದೂರ I ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ II


ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ,” ಎಂದರು.


ಮನ್ನಿಸುವನಾತ ನನ್ನ ದೋಷಗಳನು I ವಾಸಿಮಾಡುವನು ನನ್ನ ರೋಗಗಳನು II


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ಹೀಗಿರಲು, ನೀನು ಸರ್ವೇಶ್ವರನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದೇಕೆ? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ.


ಆಕಾನನಿಗೆ ಯೆಹೋಶುವನು, “ಮಗನೇ, ನೀನು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಸ್ತುತಿಸಿ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ಮುಚ್ಚುಮರೆಯಿಲ್ಲದೆ ನನಗೆ ತಿಳಿಸು, ಎಂದನು


ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.


“ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು.


‘ನಾನು ಅಶುದ್ಧಳಾಗಲಿಲ್ಲ, ಬಾಳ್‍ದೇವತೆಗಳನ್ನು ಹಿಂಬಾಲಿಸಲೇ ಇಲ್ಲ’ ಎಂದು ಹೇಗೆ ತಾನೆ ಹೇಳಬಲ್ಲೆ? ಆ ಕಣಿವೆಯಲ್ಲಿ ನಿನ್ನ ಹೆಜ್ಜೆಗುರುತುಗಳನ್ನು ನೋಡು ಅಲ್ಲಿ ನೀನು ಎಸಗಿದ ದುಷ್ಕೃತ್ಯಗಳನ್ನು ಮನಸ್ಸಿಗೆ ತಂದುಕೊ. ಅತ್ತ ಇತ್ತ ನೆಗೆದಾಡುವ, ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ ನೀನು.


ವ್ಯಭಿಚಾರಿಣಿಯ ವರ್ತನೆ ಹೀಗಿದೆ: ಅವಳು ಉಣ್ಣುತ್ತಾಳೆ, ಬಾಯಿ ಒರೆಸಿಕೊಳ್ಳುತ್ತಾಳೆ. ಬಳಿಕ ‘ನಾನು ತಪ್ಪುಮಾಡಲಿಲ್ಲವಲ್ಲಾ’ ಎನ್ನುತ್ತಾಳೆ.


ನರಮಾನವನು ದೇವರಿಗೆ ಮೋಸಮಾಡಬಹುದೋ? ಆದರೂ ನೀವು ನನಗೆ ಮೋಸಮಾಡುತ್ತಿದ್ದೀರಿ. ‘ನಿಮಗೆ ಹೇಗೆ ಮೋಸಮಾಡುತ್ತಿದ್ದೇವೆ?’ ಎಂದು ಕೇಳುತ್ತೀರೋ? ನೀವು ತೆರೆಬೇಕಾದ ದಶಮಾಂಶದಲ್ಲೂ, ಕೊಡಬೇಕಾದ ಕಾಣಿಕೆಯಲ್ಲೂ ಮೋಸಮಾಡುತ್ತಿದ್ದೀರಿ.


ಜನಸಮುದಾಯಕ್ಕೆ ನಾನು ಹೆದರಿದ್ದರೆ ಕುಲೀನರ ತಿರಸ್ಕಾರಕ್ಕೆ ನಾನು ಬೆದರಿದ್ದರೆ,


ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”


“ಈ ವಿಷಯಗಳಲ್ಲಿ ಯಾರಾದರು ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.


ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ನೀವು ಬಿಡಿಸಿದ ಈ ಜನರು ನಿಮ್ಮ ಸ್ವಕೀಯಜನರಾಗಿದ್ದಾರೆಂಬುದನ್ನು ನೆನಸಿ,


ಎಲ್ಲಾ ಇಸ್ರಯೇಲರಾಗಲಿ, ಅವರಲ್ಲೊಬ್ಬನಾಗಲಿ, ತಾವು ಅನುಭವಿಸುತ್ತಿರುವ ಉಪದ್ರವ, ದುಃಖಗಳ ನಿಮಿತ್ತ ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ,


ಈಗ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತಕ್ಕನುಸಾರ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ,” ಎಂದನು.


ಒಬ್ಬೊಂಟಿಗನಾದೆ, ಸಿಕ್ಕಿಕೊಂಡೆ ಸಂಕಟಕೆ I ಕಟಾಕ್ಷಿಸೋ ಪ್ರಭು, ಕರುಣೆತೋರೋ ತಬ್ಬಲಿಗೆ II


ನೋಡೆನ್ನ ಬಾಧೆ ಬವಣೆಗಳನು I ತೊಡೆದು ಹಾಕೆನ್ನ ಪಾಪಗಳನು II


ಬಲಿಷ್ಠ ವೈರಿಗಳು ವಿರೋಧಿಸುತಿಹರು ನಿಷ್ಕಾರಣವಾಗಿ I ಶತ್ರುಗಳನೇಕರು ದ್ವೇಷಿಸುತಿಹರು ಅನ್ಯಾಯವಾಗಿ II


ಅಂತರಂಗ ಶುದ್ಧಿಯನು ನೀ ಬಯಸುತಿ I ಅಂತರ್ಯ ಜ್ಞಾನವನು ಉದಯಗೊಳಿಸುತಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು