Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:6 - ಕನ್ನಡ ಸತ್ಯವೇದವು C.L. Bible (BSI)

6 ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದರಿಂದ ಭಕ್ತರೆಲ್ಲರು ಸಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಮಹಾಪ್ರವಾಹವು ಅಂಥವರನ್ನು ಮುಟ್ಟುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತರು ನಿನ್ನಲ್ಲಿ ಪ್ರಾರ್ಥಿಸಲಿ. ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದುದರಿಂದ ಭಕ್ತರೆಲ್ಲರು ನೀವು ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ; ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು ಅವರ ಸಮೀಪಕ್ಕೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:6
24 ತಿಳಿವುಗಳ ಹೋಲಿಕೆ  

ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ.


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


:ಸುಪ್ರಸನ್ನತೆಯ ಕಾಲದಲ್ಲಿ ನಿನ್ನನ್ನಾಲಿಸಿದೆನು; ಉದ್ಧಾರ ದಿನದಂದು ನಿನಗೆ ನೆರವಾದೆನು,” ಎಂದಿದ್ದಾರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ ಉದ್ಧಾರದ ಸುದಿನ.


ಆಗ ನೀವು ನನ್ನನ್ನು ಹುಡುಕುವಿರಿ. ಆದರೆ ನಾನು ನಿಮಗೆ ಕಾಣಸಿಗುವುದಿಲ್ಲ. ನಾನು ಇರುವಲ್ಲಿಗೆ ನೀವು ಬರುವಂತೆಯೂ ಇಲ್ಲ,” ಎಂದು ಹೇಳಿದರು.


ಆಗ ನನಗೆ ಮೊರೆಯಿಟ್ಟರೂ ಉತ್ತರಿಸೆನು; ಆತುರದಿಂದ ಹುಡುಕಿದರೂ ನಾನು ಕಾಣಸಿಗೆನು.


ಭಕ್ತನನು ಪ್ರಭು ಪ್ರತ್ಯೇಕಿಸಿಕೊಂಡನೆಂದು ತಿಳಿದುಕೊ I ನಾ ಮೊರೆಯಿಟ್ಟಾಗ ಆತ ಕಿವಿಗೊಡುವನೆಂದು ಅರಿತುಕೊ II


ನನ್ನ ಸೆಳೆದುಕೊ ಮಹಾಜಲರಾಶಿಯಿಂದ I ನಿನ್ನ ಕೈಚಾಚಿ ಮೇಲಣಲೋಕದಿಂದ I ನನ್ನನು ಬಿಡಿಸು ಅನ್ಯಜನರ ಕೈಯಿಂದ II


ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II


ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II


ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ.


ನಮಗೆ ಒದಗುವ ಎಲ್ಲಾ ಸಂಕಷ್ಟಗಳಲ್ಲಿ ಅವರು ನಮ್ಮನ್ನು ಸಂತೈಸುತ್ತಾರೆ. ಹೀಗೆ ದೇವರಿಂದ ದೊರೆತ ಆದರಣೆಯಿಂದ ವಿವಿಧ ಸಂಕಷ್ಟಗಳಲ್ಲಿ ನರಳುತ್ತಿರುವವರನ್ನು ಸಂತೈಸುವುದಕ್ಕೆ ನಾವು ಶಕ್ತರಾಗುತ್ತೇವೆ.


ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.


ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ.


ಬೀಳಬಹುದು ಸಾವಿರ ಹೆಣಗಳು ಪಕ್ಕದಲೆ I ಹತ್ತುಸಾವಿರ ಹೆಣಗಳು ನಿನ್ನ ಬಲಗಡೆಯಲೆ I ಅಂಥ ಕೇಡೊಂದೂ ಬಾರದು ನಿನ್ನ ಪಾಲಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು