Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:8 - ಕನ್ನಡ ಸತ್ಯವೇದವು C.L. Bible (BSI)

8 ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 [ಯೆಹೋವನು] - ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು [ಅನ್ನುತ್ತಾನಲ್ಲಾ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವಮಾರ್ಗವನ್ನು ಉಪದೇಶಿಸಿ ಮಾರ್ಗದರ್ಶನ ನೀಡುವೆನು; ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿನಗೆ ಬುದ್ಧಿ ಹೇಳಿ, ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಮೆಚ್ಚುಗೆಯಿಂದ ನಿನ್ನನ್ನು ನಡೆಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:8
16 ತಿಳಿವುಗಳ ಹೋಲಿಕೆ  

ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ಬನ್ನಿ ಮಿತ್ರರೇ, ಆಲಿಸಿರೀ ಮಾತನು I ಕಲಿಸುವೆನು ನಾ ನಿಮಗೆ ದೇವ ಭಯವನು II


ನನ್ನೊಡೆಯ ಅಬ್ರಹಾಮನ ಸರ್ವೇಶ್ವರನಾದ ದೇವರಿಗೆ ತಲೆಬಾಗಿ ಆರಾಧಿಸಿದೆ. ಅವರು ನನ್ನೊಡೆಯ ಅಬ್ರಹಾಮನ ಮಗನಿಗೆ ಅವರ ತಮ್ಮನ ಮಗಳನ್ನೇ ಆರಿಸಿಕೊಳ್ಳುವಂತೆ ನನ್ನನ್ನು ನೆಟ್ಟಗೆ ಇಲ್ಲಿಗೆ ಕರೆದುಕೊಂಡು ಬಂದುದಕ್ಕಾಗಿ ಅವರನ್ನು ಕೊಂಡಾಡಿದೆ.


ದೇವದರ್ಶನದ ಗುಡಾರದ ಮೇಲೆ ಆ ಮೇಘ ನಿಲ್ಲುವುದು ಎರಡು ದಿನವಾದರೂ ತಿಂಗಳಾದರೂ ಒಂದು ವರ್ಷವಾದರೂ ಸರಿಯೇ ಅಲ್ಲಿಯತನಕ ಇಸ್ರಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಅದು ಮೇಲೆದ್ದಾಗ ಅವರು ಹೊರಡುತ್ತಿದ್ದರು.


ದೇವನೇ ನನಗೆ ಭದ್ರವಾದ ದುರ್ಗ ಆತನಿಂದಲೇ ಸರಾಗ ನನ್ನ ಮಾರ್ಗ.


ಪರಲೋಕದಲ್ಲಿರುವ ನೀವು ಆಲಿಸಿ ನಿಮ್ಮ ಭಕ್ತರೂ ಪ್ರಜೆಗಳೂ ಆದ ಇಸ್ರಯೇಲರ ಪಾಪಗಳನ್ನು ಕ್ಷಮಿಸಿರಿ; ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿರಿ; ನಿಮ್ಮ ಪ್ರಜೆಗೆ ಸ್ವಂತ ಸೊತ್ತಾಗಿ ಕೊಟ್ಟ ನಾಡಿಗೆ ಮಳೆಯನ್ನು ಅನುಗ್ರಹಿಸಿರಿ.


ಪ್ರಭುವಿನ ಭಯಭಕುತಿಯುಳ್ಳವನಿಗೆ I ಲಭಿಪುದು ಖಚಿತ ಋಜುಮಾರ್ಗದ ಕಲಿಕೆ II


ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು