Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:1 - ಕನ್ನಡ ಸತ್ಯವೇದವು C.L. Bible (BSI)

1 ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು I ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು. ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಎಲ್ಲಾ ಕಾಲಗಳಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು; ಅವರ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:1
17 ತಿಳಿವುಗಳ ಹೋಲಿಕೆ  

ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ಯಾವಾಗಲೂ ಎಲ್ಲ ವರಗಳಿಗಾಗಿಯೂ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ನಿನ್ನ ಗುಣಗಾನ ನನ್ನ ಬಾಯ್ತುಂಬ I ನಿನ್ನ ಘೋಷಣೆ ನನಗೆ ದಿನವಾದ್ಯಂತ II


ಸಹೋದರರೇ, ಪ್ರಭುವಿಗೆ ಪ್ರಿಯರಾದವರೇ, ನಿಮಗಾಗಿ ನಿರಂತರವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾವು ಬದ್ಧರು. ಏಕೆಂದರೆ, ದೇವರು ನಿಮ್ಮನ್ನು ಪವಿತ್ರಾತ್ಮರ ಮುಖಾಂತರ ಪಾವನಗೊಳಿಸಿ, ನೀವು ಸತ್ಯದಲ್ಲಿ ವಿಶ್ವಾಸವಿಡುವಂತೆ ಮಾಡಿ, ಜೀವೋದ್ಧಾರವನ್ನು ಪಡೆಯುವಂತೆ ನಿಮ್ಮನ್ನು ಪ್ರಥಮ ಫಲವನ್ನಾಗಿ ಆರಿಸಿಕೊಂಡಿದ್ದಾರೆ.


ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಹುಟ್ಟಿನಿಂದಲೆ ನಾ ನಿನಗಂಟಿಕೊಂಡಿರುವೆನಯ್ಯಾ I ಗರ್ಭದಿಂದಲೆ ನೀ ಎನ್ನನು ಕರೆದುತಂದೆಯಯ್ಯಾ I ನಿರಂತರವೂ ನಿನ್ನನು ಕೊಂಡಾಡುತ್ತಿರುವೆನಯ್ಯಾ II


ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ಅಲ್ಲಿದ್ದಾಗ ಅಬ್ರಹಾಮನು ತನ್ನ ಹೆಂಡತಿ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಈ ಕಾರಣ ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಸೇರಿಸಿಕೊಂಡನು.


ಹಿಂದೆ ಅಬ್ರಹಾಮನ ಕಾಲದಲ್ಲಿ ಬಂದಿದ್ದ ಬರಗಾಲವು ಮತ್ತೊಮ್ಮೆ ಕಾನಾನ್ ನಾಡಿಗೆ ಬಂದಿತು. ಇಸಾಕನು ಫಿಲಿಷ್ಟಿಯರ ಅರಸ ಅಬೀಮೆಲೆಕನನ್ನು ಕಾಣಲು ಗೆರಾರಿಗೆ ಹೋದನು.


ಆಕೀಷನ ಸೇವಕರು, “’ಸೌಲನು ಕೊಂದನು ಸಾವಿರಗಟ್ಟಳೆ, ದಾವೀದನು ಕೊಂದನು ಹತ್ತುಸಾವಿರಗಟ್ಟಳೆ’ ಎಂಬುದಾಗಿ ಮಹಿಳೆಯರು ಕುಣಿಯುತ್ತಾ ಹಾಡಿದ್ದು ಇವನನ್ನು ಕುರಿತಲ್ಲವೇ?’ ಎಂದು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು