Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:10 - ಕನ್ನಡ ಸತ್ಯವೇದವು C.L. Bible (BSI)

10 ಯುವ ಕೇಸರಿಗೆ ಇರಬಹುದು ಹಸಿವು, ದಾಹ I ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಮೇಲಿಗೂ ಕಡಿಮೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು. ಆದರೆ ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರು ಸುವರಗಳನ್ನು ಹೊಂದಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸಿಂಹಗಳು ಹಸಿದು ಬಳಲಬಹುದು, ಆದರೆ ಯೆಹೋವ ದೇವರನ್ನು ಹುಡುಕುವವರಿಗೆ ಯಾವ ಒಳ್ಳೆಯದರ ಕೊರತೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:10
11 ತಿಳಿವುಗಳ ಹೋಲಿಕೆ  

ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.


ಗರ್ಜಿಸುತ್ತವೆ ಪ್ರಾಯಸಿಂಹಗಳು ಬೇಟೆಗಾಗಿ I ದೇವರನ್ನು ಎದುರು ನೋಡುತ್ತವೆ ಆಹಾರಕ್ಕಾಗಿ II


ಪ್ರಭು ಕುರಿಗಾಹಿಯಾಗಿರಲು ನನಗೆ I ಕುಂದುಕೊರತೆಗಳೆಲ್ಲಿಯವು ಎನಗೆ? II


ತಪ್ಪಿಸುವನವನು ಪ್ರಾಣವನು ಮರಣದಿಂದ I ಉಳಿಸುವನು ಜೀವವನು ಕ್ಷಾಮಡಾಮರದಿಂದ II


ಸಿರಿಸಂಪತ್ತಿರುವುದವನ ಮನೆಯಲಿ ಸಮೃದ್ಧಿಯಾಗಿ I ನೀತಿ ಫಲಿಸುವುದು ಆತನ ಮನದಲಿ ಶಾಶ್ವತವಾಗಿ II


ಸತ್ಪುರುಷನನ್ನು ಸರ್ವೇಶ್ವರ ಹಸಿವೆಗೊಳಿಸನು; ದುಷ್ಟನ ಆಶೆಯನ್ನಾತ ಭಂಗಪಡಿಸುವನು.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಜೀವಪ್ರಾಪ್ತಿ; ಅಂಥವನು ಸಂತುಷ್ಟನಾಗಿ ಬಾಳುವನು, ಅವನಿಗೆ ಕೇಡು ಸಂಭವಿಸದು.


ಸರ್ವೇಶ್ವರನಲ್ಲಿ ಭಯಭಕ್ತಿ ದೀನಮನೋಭಾವ, ಇವು ನೀಡುವ ಫಲ-ಸಂಪತ್ತು, ಸನ್ಮಾನ, ಆಯುಸ್ಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು