Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:11 - ಕನ್ನಡ ಸತ್ಯವೇದವು C.L. Bible (BSI)

11 ಬನ್ನಿ ಮಿತ್ರರೇ, ಆಲಿಸಿರೀ ಮಾತನು I ಕಲಿಸುವೆನು ನಾ ನಿಮಗೆ ದೇವ ಭಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ಯೆಹೋವನಲ್ಲಿ ನಿಮಗಿರಬೇಕಾದ ಭಯಭಕ್ತಿಯನ್ನು ಕಲಿಸಿಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಯೆಹೋವ ದೇವರ ಬಗ್ಗೆ ಭಯವನ್ನು ನಿಮಗೆ ಕಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:11
20 ತಿಳಿವುಗಳ ಹೋಲಿಕೆ  

ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II


ಇವರು ನನ್ನನ್ನು ಕುರಿತು : “ಇವನ ಜ್ಞಾನೋಪದೇಶ ಯಾರಿಗೆ? ಇವನು ಸಾರುವ ಸಂದೇಶ ಯಾರಿಗೆ? ಮೊಲೆಬಿಟ್ಟ ಕೂಸುಗಳಿಗೋ? ಎದೆಬಿಟ್ಟ ಮಕ್ಕಳಿಗೋ?


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ಆದ್ದರಿಂದ ಮಕ್ಕಳೇ, ನನಗೆ ಕಿವಿಗೊಡಿರಿ; ನನ್ನ ಮಾತುಗಳನ್ನು ಆಲಿಸಿರಿ.


ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ; ವಿವೇಕ ಸಂಪಾದನೆಯತ್ತ ಗಮನಕೊಡಿರಿ.


ಬಂದು ಕೇಳಿರಿ ದೇವನಲಿ ಭಯಭಕ್ತಿಯುಳ್ಳವರೆ I ದೇವನೆನಗೆ ಮಾಡಿದ ಕಾರ್ಯಗಳ ತಿಳಿಸುವೆ ನಿಮಗೆ II


ಬಾಲ್ಯದಲ್ಲೇ ಮಕ್ಕಳನ್ನು ಸರಿದಾರಿಯಲ್ಲಿ ಪಳಗಿಸು; ಮುಪ್ಪಿನಲ್ಲೂ ಅವರು ಆ ಪದ್ಧತಿ ಮೀರಿ ನಡೆಯದಿರಲಿ.


ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ಆದ್ದರಿಂದ ಮಕ್ಕಳೇ, ಕಿವಿಗೊಡಿ ನನಗೀಗ ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೆಂಬುದು ನಿಜ.


ಪ್ರಿಯ ಮಕ್ಕಳೇ, ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ, ಆಮೇಲೆ ನೀವು ನನ್ನನ್ನು ಹುಡುಕುವಿರಿ, ‘ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಹೇಳುತ್ತೇನೆ.


ಬೇಟೆಯಿಲ್ಲದೆ ಮೃಗರಾಜ ಸಾಯುವನು ಸಿಂಹದ ಮರಿಗಳು ಚದರಿಹೋಗುವವು.


ಪ್ರಭು ಕುರಿಗಾಹಿಯಾಗಿರಲು ನನಗೆ I ಕುಂದುಕೊರತೆಗಳೆಲ್ಲಿಯವು ಎನಗೆ? II


ಬಾಯಾರಿದವರ ಆಸೆಯನ್ನಾತ ಪೂರೈಸಿದನು I ಹಸಿದವರನು ಮೃಷ್ಟಾನ್ನದಿಂದ ತೃಪ್ತಿಪಡಿಸಿದನು II


ಸಿರಿಸಂಪತ್ತಿರುವುದವನ ಮನೆಯಲಿ ಸಮೃದ್ಧಿಯಾಗಿ I ನೀತಿ ಫಲಿಸುವುದು ಆತನ ಮನದಲಿ ಶಾಶ್ವತವಾಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು