Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:12 - ಕನ್ನಡ ಸತ್ಯವೇದವು C.L. Bible (BSI)

12 ಎಲೆ ಮಾನವ, ಬಲುದಿನ ಬಾಳಲು ಬಯಸುವೆಯಾ? I ಆಯುರಾರೋಗ್ಯ ಭಾಗ್ಯವನು ಆಶಿಸುವೆಯಾ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೀರ್ಘಾಯುಷ್ಯವು ಬೇಕೋ? ಬಹುದಿವಸ ಬದುಕಿ ಸುಖವನ್ನು ಅನುಭವಿಸಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೀರ್ಘಾಯುಷ್ಯವು ಬೇಕೋ? ಬಹುಕಾಲ ಸುಖವನ್ನು ಅನುಭವಿಸಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮಲ್ಲಿ ಜೀವನವನ್ನು ಪ್ರೀತಿಸುವವನು ಮತ್ತು ಬಹಳ ದಿನಗಳವರೆಗೆ ಬದುಕಬೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:12
16 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”


ನೀವು ಹಾಗು ನಿಮ್ಮ ಪುತ್ರಪೌತ್ರಾದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಈಗ ಬೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು; ಆಗ ನೀವು ದೀರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ.


ಅಲ್ಲದೆ, ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ನಾನಾತರದ ದುಡಿಮೆಗಳಲ್ಲೂ ಸುಖವನ್ನು ಅನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ತಿಳಿದಿದೆ.


ದೀರ್ಘಾಯುಸ್ಸನ್ನಿತ್ತು ತೃಪ್ತಿಪಡಿಸುವೆನು I ನಾನು ನೀಡುವ ಮುಕ್ತಿಯನವನಿಗೆ ಮನಗಾಣಿಸುವೆನು” II


“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


ನೆನೆಸಿಕೊಳ್ಳೋ ದೇವಾ, ನನ್ನ ಜೀವ ಕೇವಲ ಉಸಿರು ನನ್ನ ಕಣ್ಣುಗಳು ಇನ್ನು ಕಾಣವು ನಲಿವು.


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.


ಕೋರಿದನಾತನು ಜೀವಮಾನಕಾಲವನು I ನೀನಿತ್ತೆ ಯುಗಯುಗಾಂತರದಾಯುಷ್ಯವನು II


ಯಕೋಬನ ಮಕ್ಕಳೇ, ಕೂಡಿಬಂದು ಕೇಳಿ ನೀವೆಲ್ಲರು ಆಲಿಸಿ ನಿಮ್ಮ ತಂದೆ ಇಸ್ರಯೇಲನ ಮಾತನ್ನು:


ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.


ಇಲ್ಲವಾದರೆ ಸುಮ್ಮನಿದ್ದು ಕಿವಿಗೊಡು ನಿನಗೆ ಬೋಧಿಸುವೆನು ಸುಜ್ಞಾನವನು.”


ಮಗನೇ, ನನ್ನ ಮಾತನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು.


ಆದ್ದರಿಂದ ಮಕ್ಕಳೇ, ನನಗೆ ಕಿವಿಗೊಡಿರಿ; ನನ್ನ ಮಾತುಗಳನ್ನು ಆಲಿಸಿರಿ.


ಸರ್ವೇಶ್ವರನಲ್ಲಿನ ಭಯಭಕ್ತಿ ಜ್ಞಾನಕ್ಕೆ ಮೂಲ; ಪರಮಪಾವನನನ್ನು ಅರಿಯುವುದು ವಿವೇಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು