Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:16 - ಕನ್ನಡ ಸತ್ಯವೇದವು C.L. Bible (BSI)

16 ದುರ್ಜನರಿಗಾದರೋ ಪ್ರಭು ವಿಮುಖನು I ಅವರ ಹೆಸರನು ಧರೆಯಿಂದ ಅಳಿಸುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕೆಡುಕರಿಗಾದರೋ ಯೆಹೋವನು ವಿರೋಧವಾಗಿರುವನು. ಆತನು ಅವರನ್ನು ಸಂಪೂರ್ಣವಾಗಿ ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಕೆಟ್ಟದ್ದನ್ನು ಮಾಡುವವರಿಗೆ ಯೆಹೋವ ದೇವರು ವಿಮುಖರಾಗಿದ್ದಾರೆ, ಅಂಥವರ ಹೆಸರನ್ನು ಭೂಮಿಯೊಳಗಿಂದ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:16
15 ತಿಳಿವುಗಳ ಹೋಲಿಕೆ  

ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


“ಆದಕಾರಣ ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿರಿ: ‘ಜುದೇಯವನ್ನೆಲ್ಲ ನಿರ್ಮೂಲ ಮಾಡುವೆನು. ಕೇಡಿಗಾಗಿಯೇ ನಿಮ್ಮ ಮೇಲೆ ಕಣ್ಣಿಡುವೆನು.


ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು.


ಅವನ ಸ್ಮರಣೆ ಅಳಿದುಹೋಗುವುದು ಜಗದಲಿ ಇಲ್ಲವಾಗುವುದು ಅವನ ಹೆಸರು ನಾಡಿನಲಿ.


“ಅಷ್ಟುಮಾತ್ರವಲ್ಲ, ಇಸ್ರಯೇಲರಲ್ಲಾಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಾಗಲಿ ಯಾರಾದರು ರಕ್ತಭೋಜನ ಮಾಡಿದರೆ ಸರ್ವೇಶ್ವರ ಅಂಥ ವ್ಯಕ್ತಿಯ ವಿರುದ್ಧ ಉಗ್ರಕೋಪಗೊಳ್ಳುವರು; ಅವನನ್ನು ತನ್ನ ಪ್ರಜೆಯಿಂದ ತೆಗೆದುಹಾಕುವರು.


ಶತ್ರುವಶವಾಗಿ ಸೆರೆಗೆ ಹೋಗಿದ್ದರೂ ಅಲ್ಲಿಯೂ ಖಡ್ಗವು ನನ್ನ ಆಜ್ಞಾನುಸಾರ ಅವರನ್ನು ಕೊಲ್ಲುವುದು; ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿಯೇ ಅವರ ಮೇಲೆ ಕಣ್ಣಿಡುವೆನು.


ಇದಲ್ಲದೆ ದುರ್ಜನರು ಸತ್ತು ಸಮಾಧಿಯಾಗುವುದನ್ನು ನೋಡಿದ್ದೇನೆ. ಸಜ್ಜನರು ಆ ಪವಿತ್ರ ಸ್ಥಾನದಿಂದ ಹೊರಟುಬಂದು ಆ ದುರ್ಜನರ ನಡತೆಯನ್ನು ಅವರಿದ್ದ ಪಟ್ಟಣದಲ್ಲೇ ಹೊಗಳುತ್ತಾರೆ! ಇದು ನಿರರ್ಥಕ.


ಪ್ರಭುವಿನ ಶ್ರೀಸಾಮ್ರಾಜ್ಯವು ಅನವರತ I ಆತನ ನಾಡಲಿ ಮುಗಿಯಿತು ಅನ್ಯಜನರ ಉಳಿತ II


ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.


ತನ್ನ ಕಟಾಕ್ಷವನ್ನು ಸಜ್ಜನರ ಮೇಲೆ ಅಚಲವಾಗಿರಿಸುವನು ರಾಜರಂತೆ ಸಿಂಹಾಸನದ ಮೇಲೆ ಅವರನು ಕುಳ್ಳಿರಿಸುವನು ಅಮರವಾದ ಉನ್ನತ ಪದವಿಗೆ ಅವರನು ಏರಿಸುವನು.


ಆಗ ಕಂಪಿಸಿತು ಭೂಮಿ ಗಡಗಡನೆ I ಕದಲಿದವು ಬೆಟ್ಟದ ಬುಡಗಳು ಮಿಲಮಿಲನೆ I ಏಕೆನೆ, ಸಿಟ್ಟೇರಿತ್ತು ಆತನಿಗೆ II


ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


ಕಿವಿಮಾಡಿದವನು ಕೇಳದಿರುವನೋ? I ಕಣ್ಣುಕೊಟ್ಟವನು ನೋಡದಿರುವನೋ? II


ಸರ್ವೇಶ್ವರನು ದುರುಳರಿಗೆ ದೂರ; ನೀತಿವಂತರ ಪ್ರಾರ್ಥನೆಗೆ ಹತ್ತಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು