Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:17 - ಕನ್ನಡ ಸತ್ಯವೇದವು C.L. Bible (BSI)

17 ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ I ನೆರವೀವನವರ ಕಷ್ಟನಿವಾರಣೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ನೀತಿವಂತರ ಕೂಗನ್ನು ಕೇಳಿ ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನಿಗೆ ಪ್ರಾರ್ಥಿಸಿರಿ, ಆತನು ನಿಮಗೆ ಕಿವಿಗೊಡುವನು; ನಿಮ್ಮನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀತಿವಂತರ ಕೂಗನ್ನು ಯೆಹೋವ ದೇವರು ಕೇಳಿ, ಅವರನ್ನು ಎಲ್ಲಾ ಇಕ್ಕಟ್ಟುಗಳೊಳಗಿಂದ ಬಿಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:17
17 ತಿಳಿವುಗಳ ಹೋಲಿಕೆ  

ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು I ಸರ್ವಾಪತ್ತಿನಿಂದವನು ಮುಕ್ತಗೊಂಡನು II


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ಕ್ರಮೇಣ ಹಿಜ್ಕೀಯನು ಮರಣಕರ ರೋಗಕ್ಕೆ ಗುರಿಯಾದನು. ಆಗ ಅವನು ದೇವರನ್ನು ಪ್ರಾರ್ಥಿಸಲು ಅವರು ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದರು.


ನಾಶ ಮಾಡುತ್ತಿದ್ದೆ ನಾನವರನು ಸಂಪೂರ್ಣವಾಗಿ ಅವರಿಲ್ಲದಂತೆ ಮಾಡುತ್ತಿದ್ದೆ ಯಾರೊಬ್ಬರ ನೆನಪಿನಲಿ.


ದೇವರು ನಿರ್ದೋಷಿಯನು ತ್ಯಜಿಸಿಬಿಡುವುದಿಲ್ಲ ಕೆಡುಕರಿಗೆ ನೆರವಾಗಲು ಆತ ಕೈ ನೀಡುವುದಿಲ್ಲ.


ನಿನ್ನ ಮಂದಿರಕೆ ಬರುವೆ ನಿನ್ನಪಾರ ಪ್ರೀತಿಯ ನಿಮಿತ್ತ I ಭಕುತಿಯಿಂದ ಅಡ್ಡಬೀಳುವೆ ನಿನ್ನ ಪವಿತ್ರಾಲಯದತ್ತ II


ನಿಶ್ಶೇಷವಾಗಿ ಹೋದರು ವಿರೋಧಿಗಳು I ನಾಶವಾಗಿ ಹೋದವು ಅವರ ನಗರಗಳು I ಇಲ್ಲವಾದವು ಅವರ ಯಾವ ನೆನಪುಗಳು II


ಅವರ ಪಾಪಗಳು ಪ್ರಭುವಿನ ನೆನಪಲ್ಲಿರಲಿ I ಅವನ ಹೆಸರೇ ಇಲ್ಲದಂತಾಗಲಿ ಧರೆಯಲಿ II


ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


ಅವನಿಗೆ ವಿಮುಖನಾಗಿ ಅವನ ದುರ್ಗತಿಯು ಎಚ್ಚರಿಕೆಗೆ ಗುರುತಾಗಿಯೂ ಕಟ್ಟುಗಾದೆಗಳಿಗೆ ವಸ್ತುವಾಗಿಯೂ ಆಗುವಂತೆ ಮಾಡುವೆನು; ಅವನನ್ನು ನನ್ನ ಜನರಿಂದ ಹೊರಹಾಕುವೆನು; ಹೀಗೆ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಶತ್ರುವಶವಾಗಿ ಸೆರೆಗೆ ಹೋಗಿದ್ದರೂ ಅಲ್ಲಿಯೂ ಖಡ್ಗವು ನನ್ನ ಆಜ್ಞಾನುಸಾರ ಅವರನ್ನು ಕೊಲ್ಲುವುದು; ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿಯೇ ಅವರ ಮೇಲೆ ಕಣ್ಣಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು