Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:18 - ಕನ್ನಡ ಸತ್ಯವೇದವು C.L. Bible (BSI)

18 ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ I ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮನಗುಂದಿದವರಿಗೆ ಯೆಹೋವನು ಸಮೀಪವಾಗಿದ್ದಾನೆ; ಕುಗ್ಗಿಹೋದ ಅವರನ್ನು ಆತನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ; ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:18
17 ತಿಳಿವುಗಳ ಹೋಲಿಕೆ  

ವಾಸಿಮಾಡುವನು ಮುರಿದ ಮನಸ್ಸುಳ್ಳವರನು I ಕಟ್ಟಿ ಗುಣಪಡಿಸುವನು ಅವರ ಗಾಯಗಳನು II


ಪ್ರಭುವಿನ ಮಾರ್ಗ ಧರ್ಮಸಮ್ಮತ I ಆತನ ಕಾರ್ಯವೆಲ್ಲ ಪುನೀತ II


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಮುರಿದ ಮನವೇ ದೇವನೊಲಿವ ಯಜ್ಞವು I ನೊಂದು ಬೆಂದ ಮನವನಾತ ಒಲ್ಲೆಯೆನನು II


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II


ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ.


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ಹೇ ಪ್ರಭೂ, ನೀನಿರುವೆ ಹತ್ತಿರ I ನಿನ್ನ ಆಜ್ಞೆಗಳೆಲ್ಲ ಸುಸ್ಥಿರ II


‘ನಾನು ಈ ನಾಡನ್ನೂ ನಿವಾಸಿಗಳನ್ನೂ ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುದನ್ನು ನೀನು ಕೇಳಿದಾಗ, ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ, ನಿಮಗೆ ನೀವೇ ಹೇಸಿಕೊಳ್ಳುವಿರಿ.”


ವಂದನೆ ಹೇ ದೇವಾ, ಕೃತಜ್ಞತಾ ವಂದನೆ I ನೀ ಸಾಧಿಸಿದ ಸತ್ಕಾರ್ಯಗಳ ವಿವರಣೆ I ತಂದಿದೆ ನಮಗೆ ನಿನ್ನ ನಾಮದ ಸ್ಮರಣೆ II


“ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ಆಗ ಕಂಪಿಸಿತು ಭೂಮಿ ಗಡಗಡನೆ I ಕದಲಿದವು ಬೆಟ್ಟದ ಬುಡಗಳು ಮಿಲಮಿಲನೆ I ಏಕೆನೆ, ಸಿಟ್ಟೇರಿತ್ತು ಆತನಿಗೆ II


ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು