Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:3 - ಕನ್ನಡ ಸತ್ಯವೇದವು C.L. Bible (BSI)

3 ಬನ್ನಿ, ಕೊಂಡಾಡುವ ಪ್ರಭು ದೇವನನು II ಘನಪಡಿಸೋಣ ಅವನ ಶ್ರೀನಾಮವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನೊಂದಿಗೆ ಯೆಹೋವನನ್ನು ಸ್ತುತಿಸಿರಿ. ನಾವು ಒಟ್ಟಾಗಿ ಆತನ ಹೆಸರನ್ನು ಸನ್ಮಾನಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಸಂಗಡ ಯೆಹೋವ ದೇವರನ್ನು ಮಹಿಮೆಪಡಿಸಿರಿ; ನಾವು ಒಟ್ಟಾಗಿ ಅವರ ಹೆಸರನ್ನು ಘನಪಡಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:3
18 ತಿಳಿವುಗಳ ಹೋಲಿಕೆ  

ಸಂಕೀರ್ತಿಸುವೆನು ದೇವರ ಶ್ರೀನಾಮವನು I ಕೃತಜ್ಞತೆಯಿಂದಾತನನು ಕೊಂಡಾಡುವೆನು II


ಆಗ ಹೀಗೆಂದು ಮರಿಯಳು ಹೊಗಳಿದಳು:


ನಿನ್ನನು ಅರಸುವವರೆಲ್ಲರು ಹರ್ಷಾನಂದಗೊಳ್ಳಲಿ I ನಿನ್ನ ರಕ್ಷಣಾಪ್ರಿಯರು ಸತತ “ಪ್ರಭು ಪರಾಕ್ರಮಿ” ಎನ್ನಲಿ II


ಜನಾಂಗಗಳೇ, ನಮಿಸಿರಿ ನಮ್ಮ ದೇವನನು I ಗಟ್ಟಿಯಾಗಿ ಮಾಡಿರಿ ಅವನ ಗುಣಗಾನವನು II


ನನಗೆ ನ್ಯಾಯ ಬಯಸುವವರು ನಲಿದು ಮಾಡಲಿ ಜಯಕಾರ I “ದಾಸನ ಹಿತೈಷಿ ಪ್ರಭುಗೆ, ಜೈ” ಎಂಬ ನಿರಂತರ ಪ್ರಚಾರ II


ಆತನು ಮಹಾಶಬ್ದದಿಂದ, “ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ; ಅವರಿಗೆ ಸ್ತುತಿಸ್ತೋತ್ರ ಸಲ್ಲಿಸಿರಿ. ಏಕೆಂದರೆ, ಅವರು ತೀರ್ಪುಕೊಡುವ ಗಳಿಗೆಯು ಬಂದಿದೆ. ಆದ್ದರಿಂದ ಭೂಸ್ವರ್ಗಗಳನ್ನೂ ಕಡಲುಕಾರಂಜಿಗಳನ್ನೂ ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸಿರಿ,” ಎಂದು ಹೇಳಿದನು.


ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರೂ ಅನ್ಯಧರ್ಮೀಯರೂ ಈ ವಿಷಯವನ್ನು ಕೇಳಿ ಭಯಭೀತರಾದರು. ಪ್ರಭು ಯೇಸುವಿನ ನಾಮವನ್ನು ಸಂಕೀರ್ತಿಸಿದರು.


ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.


ಹೆಮ್ಮೆಪಡಿ, ನೆನೆದು ಆತನ ಶ್ರೀನಾಮವನು I ಹಿಗ್ಗಲಿ ಹೃದಯ, ಕೋರಿ ಆತನ ದರ್ಶನವನು II


ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು I ಸೆರೆಯಲ್ಲಿಹ ತನ್ನವರನು ತಿರಸ್ಕರಿಸನು II


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು