Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:4 - ಕನ್ನಡ ಸತ್ಯವೇದವು C.L. Bible (BSI)

4 ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು I ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಯೆಹೋವನ ಸನ್ನಿಧಿಯಲ್ಲಿ ಮೊರೆಯಿಟ್ಟಾಗ ಆತನು ನನಗೆ ಸಹಾಯಮಾಡಿದನು. ನನ್ನನ್ನು ಎಲ್ಲಾ ಭೀತಿಗಳಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು, ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:4
20 ತಿಳಿವುಗಳ ಹೋಲಿಕೆ  

ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ I ಪ್ರಾರ್ಥನೆ ಮಾಡಿದೆ ಆ ನನ್ನ ದೇವನಲಿ I ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ II


“ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ಹೆದರಿಕೆ ಉಂಟಾದಾಗ I ನೀನೆ ನನಗೆ ಆಶ್ರಯ II


ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.


“ಸಂಕಟದಲಿ, ಸರ್ವೇಶ್ವರಾ, ನಾ ನಿನಗೆ ಮೊರೆಯಿಟ್ಟೆ ನೀನೆನ್ನ ಮೊರೆಗೆ ಕಿವಿಗೊಟ್ಟೆ. ಪಾತಾಳದಂತರಾಳದಿಂದ ನಿನ್ನ ನೆರವನ್ನು ಬೇಡಿದೆ ನೀನೆನ್ನ ಪ್ರಾರ್ಥನೆಯನ್ನಾಲಿಸಿದೆ.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ದೇವರಿಂದ ದೂರನಾದೆಯೆಂಬ ದಿಗಿಲೇರಲು I ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಆದುದರಿಂದ: ‘ಕೇಳಿರಿ, ನಿಮಗೆ ದೊರಕುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II


ಕಡಲಲ್ಲಿ ಗುಡ್ಡಗಳು ಮುಳುಗಿದರೂ ದಿಗಿಲಿಲ್ಲ I ಪೊಡವಿ ಕಂಪಿಸಿದರು ನಮಗೇನು ಭಯವಿಲ್ಲ II


ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.


ನನಗೆ ನ್ಯಾಯ ಬಯಸುವವರು ನಲಿದು ಮಾಡಲಿ ಜಯಕಾರ I “ದಾಸನ ಹಿತೈಷಿ ಪ್ರಭುಗೆ, ಜೈ” ಎಂಬ ನಿರಂತರ ಪ್ರಚಾರ II


ಬಡವನು, ದುರ್ಬಲನು ಆದೆನಗೆ ಪ್ರಭೂ, ನೀ ಹಿತಚಿಂತಕನು I ತಡಮಾಡಬೇಡ ದೇವಾ, ನೀನೆನಗುದ್ಧಾರಕನು, ಸಹಾಯಕನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು