Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:5 - ಕನ್ನಡ ಸತ್ಯವೇದವು C.L. Bible (BSI)

5 ಆತನತ್ತ ತಿರುಗಿದ ಮುಖ ಅರಳುವುದು I ಲಜ್ಜೆಯಿಂದೆಂದಿಗು ಕುಂದಿಹೋಗದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಲಜ್ಜೆಯಿಂದ ಕೆಡುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆತನನ್ನೇ ದೃಷ್ಟಿಸುವವರು ಸಹಾಯವನ್ನು ಹೊಂದಿಕೊಳ್ಳುವರು. ಅವರಿಗೆ ಆಶಾಭಂಗವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರನ್ನು ದೃಷ್ಟಿಸಿದವರು ಪ್ರಕಾಶ ಹೊಂದಿದರು; ಅಂಥವರ ಮುಖಗಳು ನಾಚಿಕೆಯಿಂದ ಕುಂದಿಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:5
17 ತಿಳಿವುಗಳ ಹೋಲಿಕೆ  

ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಆಗಲಿ ಆಶಾಭಂಗ ನಿನ್ನೆದುರಾಳಿಗಳಿಗೆ I ಹಾಗಾಗದಿರಲಿ ನಿನ್ನ ನಿರೀಕ್ಷಿಸುವವರಿಗೆ II


ಹೊತ್ತಿಸುವೆ ಪ್ರಭು, ನೀನೆನ್ನ ಬಾಳಿನ ದೀಪವನು I ಕತ್ತಲನು ನೀಗಿಸಿ ಜ್ಯೋತಿ ಬೆಳಗುವನಾ ದೇವನು II


ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II


ನಿನ್ನಲ್ಲಿದೆ ಜೀವದ ಬುಗ್ಗೆ I ನಿನ್ನ ಬೆಳಕಿನಿಂದ ಬೆಳಕೆಮಗೆ II


ಇದನ್ನು ನೋಡಿ ನೀ ಬೆಳಗುವೆ ಕಾಂತಿಯಿಂದ ಉಬ್ಬುವುದು ನಿನ್ನ ಎದೆ ಆನಂದದಿಂದ. ಹರಿಯುವುದು ನಿನ್ನೆಡೆಗೆ ಸಮುದ್ರ ವ್ಯಾಪಾರ ಸಮೃದ್ಧಿ ದೊರಕುವುದು ನಿನಗೆ ಅನ್ಯಜನಾಂಗಗಳ ಆಸ್ತಿಪಾಸ್ತಿ.


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಹೇ ಪ್ರಭು, ಹೇ ದೇವ, ಎನ್ನ ವೀಕ್ಷಿಸಿ ಸದುತ್ತರ ಪಾಲಿಸು I ಮರಣ ನಿದ್ರೆ ಬಾರದಂತೆ ನನ್ನ ನೇತ್ರಗಳನು ಬೆಳಗಿಸು II


ಕವಿಯಲಿ ಅವಮಾನ ನಿಂದೆ ಇವರ ಮುಖವನು I ಅರಸುವರಾಗ ಪ್ರಭೂ, ನಿನ್ನ ಸಿರಿನಾಮವನು II


ಅಲ್ಲಿನ ಯೆಹೂದ್ಯರು ಹರ್ಷಾನಂದ ಪ್ರಭಾವಗಳಿಂದ ಪುಳಕಿತರಾದರು.


ಯೋವಾಬನು ಅರಸನ ಬಳಿಗೆ ಹೋಗಿ, “ನಿಮ್ಮನ್ನೂ ನಿಮ್ಮ ಗಂಡುಹೆಣ್ಣು ಮಕ್ಕಳನ್ನೂ ಹೆಂಡತಿಯರನ್ನೂ ಉಪಪತ್ನಿಯರನ್ನೂ ರಕ್ಷಿಸಿದಂಥ ನಿಮ್ಮ ಸೇವಕರನ್ನು ಈ ದಿನ ಅಪಮಾನಪಡಿಸಿದಿರಿ.


ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಎಲ್ಲೆಲ್ಲಿಯೋ ಅಲೆದಾಡಿದನು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡನು ಎಂದು ಸೌಲನಿಗೆ ಗೊತ್ತಾಗಲು ಅವನು ಪ್ರಯಾಣವನ್ನು ನಿಲ್ಲಿಸಿಬಿಟ್ಟನು.


ಹಾಯಾಗಿ ಮಲಗಿ ನಿದ್ರಿಸುವೆನು I ಸುಖಿಯಾಗಿ ಮರಳಿ ಎದ್ದೇಳುವೆನು I ಕಾಯ್ದು ಕಾಪಾಡುವನು ಪ್ರಭು ನನ್ನನು II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು