Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:7 - ಕನ್ನಡ ಸತ್ಯವೇದವು C.L. Bible (BSI)

7 ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು I ಕಾಯುವನು ಪ್ರಭುವಿನ ದೂತನೆ ಬಂದಿಳಿದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನ ಭಕ್ತರ ಸುತ್ತಲೂ ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರಿಗೆ ಭಯಪಡುವವರ ಸುತ್ತಲೂ ಯೆಹೋವ ದೇವರ ದೂತನು ಇಳಿದುಕೊಂಡು ಅವರನ್ನು ಕಾಪಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:7
14 ತಿಳಿವುಗಳ ಹೋಲಿಕೆ  

ನೀನು ಹೋದೆಡೆಯೆಲ್ಲಾ ನಿನ್ನ ಕಾಯುವುದಕ್ಕೆ I ಕೊಟ್ಟಿಹನಾತ ಕಟ್ಟಳೆ ತನ್ನ ದೂತರಿಗೆ II


ನನ್ನ ದೇವರು ತಮ್ಮ ದೂತನನ್ನು ಕಳಿಸಿ, ಸಿಂಹಗಳ ಬಾಯನ್ನು ಬಂಧಿಸಿದರು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆ ದೇವರ ದೃಷ್ಟಿಯಲ್ಲಿ ನಾನು ನಿರ್ಮಲನು. ರಾಜರಾದ ತಮಗೂ ನಾನು ಯಾವ ದ್ರೋಹವನ್ನೂ ಮಾಡಲಿಲ್ಲ,” ಎಂದು ಹೇಳಿದನು.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು.


“ಹೇ ಸರ್ವೇಶ್ವರಾ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಕಣ್ಣುಗಳನ್ನು ತೆರೆದರು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


ಶತ್ರುಗಳು ಅತ್ತ ಕಾಲಿಡದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಿರುವೆನು. ಯಾವ ಬಾಧಕನೂ ನನ್ನ ಜನರ ಮೇಲೆ ಧಾಳಿಮಾಡದಂತೆ ನಾನೇ ಕಣ್ಣಿಟ್ಟು ನೋಡಿಕೊಳ್ಳುವೆನು.”


“ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು.


ವಿಧವೆಯರನ್ನಾಗಲಿ ದಿಕ್ಕಿಲ್ಲದ ಮಕ್ಕಳನ್ನಾಗಲಿ ಬಾಧಿಸಬಾರದು.


“ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡು.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II


ನನ್ನ ಹಿಂದೆಯೂ ಮುಂದೆಯೂ ನೀನಿರುವೆ I ಅಭಯ ಹಸ್ತವನು ನನ್ನ ಮೇಲಿರಿಸಿರುವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು