Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:8 - ಕನ್ನಡ ಸತ್ಯವೇದವು C.L. Bible (BSI)

8 ಸವಿದು ನೋಡು ಪ್ರಭುವಿನ ಮಾಧುರ್ಯವನು I ಆತನನು ಆಶ್ರಯಿಸಿಕೊಂಡವನು ಧನ್ಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ. ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ; ಅವರನ್ನು ಆಶ್ರಯಿಸುವ ಮನುಷ್ಯನು ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:8
17 ತಿಳಿವುಗಳ ಹೋಲಿಕೆ  

ನಿನ್ನ ನುಡಿ ಎನಿತೊ ರುಚಿ ನನ್ನ ನಾಲಿಗೆಗೆ I ಜೇನುತುಪ್ಪಕ್ಕಿಂತ ಸಿಹಿ ನನ್ನ ಬಾಯಿಗೆ II


ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ಪ್ರಭುವೇ, ಸ್ವರ್ಗಸೇನಾಧೀಶ್ವರನೇ I ನಿನ್ನಲಿ ನಂಬಿಕೆ ಇಡುವವನೇ ಧನ್ಯನು I


ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!


ನಿನ್ನಚಲ ಪ್ರೀತಿ, ಹೇ ದೇವಾ, ಎಷ್ಟೋ ಅಮೂಲ್ಯ I ನಿನ್ನಕ್ಕರೆಯ ರೆಕ್ಕೆಗಳಡಿ ನರಮಾನವರಿಗಾಶ್ರಯ II


ನಿನ್ನನರಿತವರನು ಪ್ರೀತಿಸು ಮುಂದಕ್ಕೂ I ಒಳಿತನ್ನು ಮಾಡು ನೇರಮನಸ್ಕರಿಗೂ II


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ನೀಚಕಾರ್ಯವೆಸಗಿ ಹಿಗ್ಗುವ ಘನ ಮಾನವನೆ I ದೇವರ ಅನಂತ ಕೃಪೆಯನು ಪ್ರತಿಭಟಿಸುವವನೆ I ದೇವರ ದೃಷ್ಟಿಯಲಿ ನೀನು ಹೀನಾಯನೆ II


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು