Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:9 - ಕನ್ನಡ ಸತ್ಯವೇದವು C.L. Bible (BSI)

9 ದೇವಜನರೆ, ನಿಮಗಿರಲಿ ಪ್ರಭುವಿನ ಭಯಭಕುತಿ I ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರ್ರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನ ಜನರೇ, ಆತನನ್ನು ಆರಾಧಿಸಿರಿ. ಆತನ ಭಕ್ತರಿಗೆ ಬೇರೆ ಯಾವ ಆಶ್ರಯಸ್ಥಾನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರ ಭಕ್ತರೇ, ನೀವು ಯೆಹೋವ ದೇವರಿಗೆ ಭಯಪಡಿರಿ; ಏಕೆಂದರೆ ದೇವಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:9
13 ತಿಳಿವುಗಳ ಹೋಲಿಕೆ  

ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು.


ಪ್ರಭು ಕುರಿಗಾಹಿಯಾಗಿರಲು ನನಗೆ I ಕುಂದುಕೊರತೆಗಳೆಲ್ಲಿಯವು ಎನಗೆ? II


ಪ್ರಭುವಿನ ಭಕ್ತರೇ, ಪ್ರೀತಿಸಿ ನೀವಾತನನು ಅಧಿಕಾಧಿಕವಾಗಿ I ಶರಣರನು ರಕ್ಷಿಸಿ, ಸೊಕ್ಕಿನವರನು ಶಿಕ್ಷಿಸುವನಾತ ಸರಿಯಾಗಿ II


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಮಣಿಯಿರಿ, ಪ್ರಭುವಿನಲಿ ಭಯಭಕುತಿಯುಳ್ಳವರೇ I ಭಜಿಸಿರಿ ಇಸ್ರಯೇಲರೇ, ಯಾಕೋಬ ಕುಲಜರೇ II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು