Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:13 - ಕನ್ನಡ ಸತ್ಯವೇದವು C.L. Bible (BSI)

13 ಅವರು ಅಸ್ವಸ್ಥರಾಗಿರಲು ಶೋಕವಸ್ತ್ರಧಾರಿಯಾದೆ I ತಲೆಬಾಗಿ ಜಪಿಸಿದೆ, ನಾ ಮನನೊಂದು ಉಪವಾಸವಿದ್ದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರು ಅಸ್ವಸ್ಥರಾಗಿದ್ದಾಗ ನಾನು ದುಃಖಪಟ್ಟೆನು; ಉಪವಾಸ ಮಾಡಿದೆನು. ನಾನು ಅವರಿಗೋಸ್ಕರ ಪ್ರಾರ್ಥಿಸಿದ್ದಕ್ಕೆ ಇದು ನನಗೆ ಪ್ರತಿಫಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನಾದರೋ ಅವರು ಅಸ್ವಸ್ಥರಾದಾಗ ಗೋಣಿತಟ್ಟು ಹೊದ್ದುಕೊಂಡು ಉಪವಾಸದಿಂದ ತಗ್ಗಿಸಿಕೊಂಡೆನು; ನನ್ನ ಪ್ರಾರ್ಥನೆಗಳಿಗೆ ಉತ್ತರ ದೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:13
13 ತಿಳಿವುಗಳ ಹೋಲಿಕೆ  

ಕಷ್ಟಾನುಭವಿಯನು ಕಂಡು ನಾನು ಕಣ್ಣೀರಿಡಲಿಲ್ಲವೆ? ದಟ್ಟದರಿದ್ರರಿಗೋಸ್ಕರ ನಾನು ದುಃಖಪಡಲಿಲ್ಲವೆ?


ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ.


ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.


ಇದು ನಿಮಗೆ ಪೂರ್ತಿ ದುಡಿಮೆ ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸವಿರಬೇಕು; ನಿಮಗಿದು ಶಾಶ್ವತನಿಯಮ.


ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು.


ಸ್ವಾರ್ಥ ನಿಗ್ರಹಕ್ಕಾಗಿ ನಾನು ನೇಮಿಸಿದ ಉಪವಾಸದ ದಿನ ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣೀತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ನನಗೆ ಮೆಚ್ಚುಗೆಯಾಗುವ ಉಪವಾಸ ಎನ್ನುತ್ತೀರೊ?


“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ.


ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ ನಿಮ್ಮಲ್ಲಿ ವಾಸಮಾಡುವ ಅನ್ಯದೇಶದವರೆಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನ ಸಕಲ ವಿಧವಾದ ದುಡಿಮೆಗಳನ್ನೂ ಬಿಟ್ಟು ತಮ್ಮನ್ನೇ ಪರಿತ್ಯಜಿಸಿಕೊಳ್ಳಬೇಕು.


ಊರ ಬಾಗಿಲಲಿ ಕೂರುವವರ ಹರಟೆಗೆ ಕಾರಣನಾದೆನಯ್ಯಾ I ಸಾರಾಯಿ ಮದ್ಯಸಾರ ಕುಡಿವವರ ಪದ್ಯವಸ್ತುವಾದೆನಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು