Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:17 - ಕನ್ನಡ ಸತ್ಯವೇದವು C.L. Bible (BSI)

17 ಇನ್ನೆಷ್ಟರವರೆಗೆ ಪ್ರಭು, ನೀ ಸುಮ್ಮನಿರುವೆ ನೋಡುತ? I ಬಿಡಿಸೆನ್ನ ಹಾವಳಿಯಿಂದ, ಸಿಂಹಗಳ ಬಾಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ? ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; ನನ್ನ ಪರಮಪ್ರಿಯ ಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕರ್ತನೇ, ಇನ್ನೆಷ್ಟರವರೆಗೆ ಸುಮ್ಮನೆ ನೋಡುತ್ತಾ ಇರುವಿ? ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; ನನ್ನ ಪರಮಪ್ರಿಯಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನ ಒಡೆಯನೇ, ಇವುಗಳನ್ನು ಇನ್ನೆಷ್ಟುಕಾಲ ನೋಡುತ್ತಾ ಇರುವೆ? ಅವರು ನನ್ನನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ. ನನ್ನ ಪ್ರಾಣವನ್ನು ರಕ್ಷಿಸು; ಸಿಂಹಗಳಂತಿರುವ ಆ ದುಷ್ಟರಿಂದ ನನ್ನ ಪ್ರಿಯ ಪ್ರಾಣವನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರೇ, ಎಷ್ಟರವರೆಗೆ ನೀವು ಸುಮ್ಮನೆ ನೋಡುತ್ತಾ ಇರುವಿರಿ? ಅವರ ಅಪಾಯಗಳಿಂದ ನನ್ನ ಪ್ರಾಣವನ್ನು ಬಿಡಿಸಿರಿ. ಆ ಸಿಂಹಗಳಿಂದ ನನ್ನ ಅಮೂಲ್ಯ ಪ್ರಾಣವನ್ನೂ ತಪ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:17
11 ತಿಳಿವುಗಳ ಹೋಲಿಕೆ  

ಕೇಡನ್ನು ನೋಡಲಾರದಷ್ಟು ನಿಷ್ಕಳಂಕ ನಿಮ್ಮ ಕಣ್ಣು. ಕೆಡುಕನ್ನು ಸಹಿಸಲಾಗದಸ್ಟು ಪವಿತ್ರರು ನೀವು. ಇಂತಿರಲು ಕೆಡುಕನ್ನು ನೋಡಿಕೊಂಡಿರುವಿರೇಕೆ? ದುಷ್ಟನು ಶಿಷ್ಟನಾದವನನ್ನು ಕಬಳಿಸುತ್ತಿರುವುದನ್ನು ನೋಡಿ ಸುಮ್ಮನಿರುವಿರೇಕೆ?


ಒಡೆಯಾ, ಚಿರಮರೆಯಾಗಿರುವೆ? ಇನ್ನೆಷ್ಟರವರೆಗೆ? I ನಿನ್ನ ಕೋಪಾಗ್ನಿ ಎಡೆಬಿಡದೆ ಉರಿಯುತ್ತಿರಬೇಕೆ? II


ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ಜೀವಾತ್ಮ ನಾ ಬಳಲಿ ತತ್ತರಿಸುತ್ತಿರುವೆ I ಎಲ್ಲಿಯತನಕ ಪ್ರಭು ನೀ ಕೈಬಿಟ್ಟಿರುವೇ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು