Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:19 - ಕನ್ನಡ ಸತ್ಯವೇದವು C.L. Bible (BSI)

19 ಕಳ್ಳ ವೈರಿಗಳೆನ್ನ ನೋಡಿ ಹಿಗ್ಗಲು ಬಿಡಬೇಡ I ಈ ಕಾರಣ ಶತ್ರುಗಳು ಕಣ್ಣು ಮಿಟುಕಿಸುವುದು ಬೇಡ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿರ್ನಿವಿುತ್ತ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಅವಕಾಶಕೊಡಬೇಡ; ನಿಷ್ಕಾರಣವೈರಿಗಳ ಕಣ್ಣುಸನ್ನೆಗೆ ಆಸ್ಪದ ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸುಳ್ಳುಗಾರರಾದ ನನ್ನ ವೈರಿಗಳು ಇನ್ನು ಮೇಲೆ ಹಿಗ್ಗಲಾರರು. ನನ್ನ ವೈರಿಗಳು ತಮ್ಮ ಒಳಸಂಚುಗಳಿಗೆ ಖಂಡಿತವಾಗಿ ದಂಡಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿಷ್ಕಾರಣವಾಗಿರುವ ನನ್ನ ಶತ್ರುಗಳು ನನ್ನ ಮೇಲೆ ಸುಳ್ಳಾಗಿ ಸಂತೋಷಪಡದೆ ಇರಲಿ; ನನ್ನನ್ನು ಕಾರಣವಿಲ್ಲದೆ ದ್ವೇಷಿಸುವವರು ಕಣ್ಣು ಸನ್ನೆ ಮಾಡದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:19
19 ತಿಳಿವುಗಳ ಹೋಲಿಕೆ  

ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ಅವನು ಕಣ್ಣು ಮಿಟುಕಿಸುತ್ತಾನೆ, ಕಾಲು ಕೆರೆಯುತ್ತಾನೆ, ಬೆರಳ ಸನ್ನೆಯಿಂದಲೆ ಮಾತಾಡುತ್ತಾನೆ.


ಬಲಿಷ್ಠ ವೈರಿಗಳು ವಿರೋಧಿಸುತಿಹರು ನಿಷ್ಕಾರಣವಾಗಿ I ಶತ್ರುಗಳನೇಕರು ದ್ವೇಷಿಸುತಿಹರು ಅನ್ಯಾಯವಾಗಿ II


ತಾನು ಜಯಗಳಿಸಿದೆನೆಂದು ಶತ್ರು ಹೇಳಿಕೊಳ್ಳದಿರಲಿ I ನಾನು ಜಾರಿ ಬಿದ್ದೆನೆಂದು ವೈರಿ ಹಿರಿಹಿಗ್ಗದಿರಲಿ II


ಕಣ್ಣು ಮಿಟುಕಿಸುವವನು ತೊಂದರೆಗೆ ಕಾರಣನು; ನೆಟ್ಟಗೆ ಗದರಿಸುವವನು ಸಮಾಧಾನಕರನು.


ಶತ್ರುಗಳು ಹರ್ಷಿಸಬಾರದು ನನ್ನ ವಿಷಯದಲಿ I ಹಿಗ್ಗಬಾರದವರು ನಾ ಜಾರಿ ಬಿದ್ದಲ್ಲಿ II


“ಹಕ್ಕಿಯನ್ನು ಬೇಟೆಯಾಡುವವರೋ ಎಂಬಂತೆ ನಿಷ್ಕಾರಣ ವೈರಿಗಳು ಬೆನ್ನಟ್ಟಿ ಓಡಿಬಂದರು ನನ್ನ ಹಿಂದೆ.


ಪೀಡಿಸುತಿಹರು ನಿಷ್ಕಾರಣವಾಗಿ ರಾಜರುಗಳು I ನಿನ್ನ ವಾಕ್ಯದ ಭೀತಿ ಇಹುದು ನನ್ನ ಹೃದಯದೊಳು II


ಹಾಕಿಹರು ದ್ವೇಷತುಂಬಿದ ಮಾತುಗಳ ಮುತ್ತಿಗೆ I ನನ್ನ ಎದುರಿಸುತಿಹರು ನಿಷ್ಕಾರಣವಾಗಿಯೆ II


ನನಗೆ ಆಪತ್ತೊದಗಲದೊ ಸಂತೋಷಿಸಿದರು ಸಭೆಗೂಡಿ I ಸೂರೆಮಾಡಿದರು ತಿರುತಿರುಗಿ ಆ ಭ್ರಷ್ಟರೊಟ್ಟುಗೂಡಿ II


ಶತ್ರುಗಾಗದಿರಲಿ ಸಡಗರ I ನನಗೊದಗದಿರಲಿ ಮುಜುಗರ II


ನಿನ್ನ ಹೃದಯ ನಿನ್ನನ್ನು ದೂರ ಒಯ್ದಿದೆ, ಏಕೆ? ನಿನ್ನ ಕಣ್ಣು ಕಿಡಿಕಾರುತ್ತಿದೆ ಏಕೆ?


ಇಗೋ, ನಾನೆಡವಿ ಬೀಳಲಿರುವೆ I ಆಪತ್ತಿಗಾಗಿ ಸಂಕಟಪಡುತ್ತಿರುವೆ II


ಎಸಗಿಹರು ಉಪಕಾರಕೆ ಪ್ರತಿಯಾಗಿ ಅಪಕಾರ I ಎದುರಿಸುತಿಹರೀಗ ನಾ ಹಿಡಿದಿರುವ ಸನ್ಮಾರ್ಗ II


ನನ್ನ ಮೂರ್ಖತನವನು ದೇವಾ, ನೀ ಬಲ್ಲೆಯಯ್ಯಾ I ನನ್ನಪರಾಧಗಳು ನಿನಗೆ ಮರೆಯಾಗಿಲ್ಲವಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು