Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:21 - ಕನ್ನಡ ಸತ್ಯವೇದವು C.L. Bible (BSI)

21 ಎನ್ನೀ ಪರಿಸ್ಥಿತಿಯನು ಕಂಡು ಅವರು ಬಾಯಿ ಕಿಸಿದು I ನುಡಿದರು, “ಆಹಾ! ಕಣ್ಣಾರೆ ಕಂಡೆವಲ್ಲಾ” ಎಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ನನ್ನನ್ನು ನೋಡಿ ಬಾಯಿಕಿಸಿದು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ” ಎಂದು ಅನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ನನ್ನನ್ನು ನೋಡಿ ಬಾಯಿಕಿಸಿದು - ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ ಅನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನ್ನ ವೈರಿಗಳು ನನ್ನನ್ನು ದೂಷಿಸುವರು. “ಆಹಾ! ನೀನು ಮಾಡುತ್ತಿರುವುದು ನಮಗೆ ಗೊತ್ತು!” ಎನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೌದು, ಅವರು ತಮ್ಮ ಬಾಯನ್ನು ತೆರೆದು ನನಗೆ ವಿರೋಧವಾಗಿ, “ಆಹಾ, ಆಹಾ, ನಾವು ಕಣ್ಣಾರೆ ಕಂಡೆವು,” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:21
11 ತಿಳಿವುಗಳ ಹೋಲಿಕೆ  

ಆಹಾ ಆಹಾ ಎಂದು ಹಾಸ್ಯ ಮಾಡುವವರು I ಅಕಟಕಟವೆನ್ನಲಿ ಹೇಸಿಗೆಯಿಂದಾ ನರರು II


ಗರ್ಜಿಸುವ ಉಗ್ರಸಿಂಹಗಳಂತೆ ವೈರಿಗಳು I ಕಾದಿಹರು ಬಾಯಿ ತೆರೆದು ನನ್ನ ಕಬಳಿಸಲು II


“ಆಹಾಹಾ” ಎಂದೆನ್ನ ಜರೆಯುವವರು I ಬೆಂಗೊಟ್ಟು ಓಡಲಿ ಆ ಲಜ್ಜೆಗೆಟ್ಟವರು II


ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಎಂತಲೆ ಸ್ವಂತ ಇಚ್ಛೆಯಿಂದ ಬಲಿಯನರ್ಪಿಸುವೆ ನಿನಗೆ I ಧನ್ಯವಾದ ಪ್ರಭು, ನಿನ್ನ ಸರ್ವೋತ್ತಮ ನಾಮಕೆ II


ದೇವರು ನನ್ನ ಬಿಲ್ಲನು ಸಡಿಲಗೊಳಿಸಿ ಪೆಟ್ಟಿಗೀಡಾಗಿಸಿದ್ದಾರೆ ಅವರೋ ಕಡಿವಾಣವಿಲ್ಲದ ಕುದುರೆಗಳಂತೆ ನನ್ನ ಮುಂದಿದ್ದಾರೆ.


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ನಿನ್ನನು ಅರಸುವವರೆಲ್ಲರು ಹರ್ಷಾನಂದಗೊಳ್ಳಲಿ I ನಿನ್ನ ರಕ್ಷಣಾಪ್ರಿಯರು ಸತತ “ಪ್ರಭು ಪರಾಕ್ರಮಿ” ಎನ್ನಲಿ II


ನಿನ್ನನ್ನು ನೋಡಿ ಶತ್ರುಗಳೆಲ್ಲರು ಕಟಕಟನೆ ಹಲ್ಲು ಕಡಿಯುತ್ತಾರಲ್ಲಾ ಬಾಯಿ ಕಿಸಿದು ! “ಹಾ, ಆಕೆಯನ್ನು ಕಬಳಿಸಿಬಿಟ್ಟೆವು ಈ ದಿನಕ್ಕಾಗಿಯೆ ನಾವು ಕಾದಿದ್ದೆವು ಈಗ ಅದನ್ನು ಕಣ್ಣಾರೆ ಕಂಡೆವು” ಎಂದು ಕೊಚ್ಚಿಕೊಳ್ಳುತ್ತಾರಲ್ಲಾ !


ಸರ್ವೇಶ್ವರನಾದ ದೇವರ ವಾಕ್ಯವನ್ನು ಕೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದುದ್ದನ್ನು, ಇಸ್ರಯೇಲ್ ನಾಡು ಪಾಳುಬಿದ್ದುದನ್ನು, ಯೆಹೂದ್ಯವಂಶದವರು ಗಡೀಪಾರಾದುದನ್ನು ನೋಡಿ ನೀನು ಹಿರಿಹಿರಿ ಹಿಗ್ಗಿಹೋದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು